1 Samuel · chapter 18 · verse 15
1 Samuel 18:15 in Kannada
ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು.
Kartanu avana sangada iddanu. Avanu mahaabuddhivantanaagi nadeyuvadannu saulanu nodi avanige bhaya pattiddanu.
1 Samuel 18:15 in English
- King James Version (KJV)
- Wherefore when Saul saw that he behaved himself very wisely, he was afraid of him.
- World English Bible (WEB)
- When Saul saw that he behaved himself very wisely, he stood in awe of him.
- American Standard Version (ASV)
- And when Saul saw that he behaved himself very wisely, he stood in awe of him.
- Bible in Basic English (BBE)
- And when Saul saw how wisely he did, he was in fear of him.
- Darby Translation (DBY)
- And Saul saw that he prospered well, and he stood in awe of him.
- Webster's Bible (WBS)
- Wherefore when Saul saw that he behaved himself very wisely, he was afraid of him.
- Young's Literal Translation (YLT)
- and Saul seeth that he is acting very wisely, and is afraid of him,
Read in context
- 13ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು.
- 14ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
- 15ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು.
- 16ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು.
- 17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
Cross references
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Daniel 6:4–5 ದಾನಿಯೇಲನು 6:4–5ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು. ಆಗ ಆ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.