1 Samuel · chapter 21 · verse 13
1 Samuel 21:13 in Kannada
ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
Avara kannumunde tanna buddhiyannu maarpadisi tannannu huchchana haage toramaadi dvaarada kadagalannu kereyuttaa tanna baayiya jollannu tanna gaddada mele surisikondanu.
1 Samuel 21:13 in English
- King James Version (KJV)
- And he changed his behaviour before them, and feigned himself mad in their hands, and scrabbled on the doors of the gate, and let his spittle fall down upon his beard.
- World English Bible (WEB)
- He changed his behavior before them and pretended to be insane in their hands, and scribbled on the doors of the gate, and let his spittle fall down on his beard.
- American Standard Version (ASV)
- And he changed his behavior before them, and feigned himself mad in their hands, and scrabbled on the doors of the gate, and let his spittle fall down upon his beard.
- Bible in Basic English (BBE)
- So changing his behaviour before them, he made it seem as if he was off his head, hammering on the doors of the town, and letting the water from his mouth go down his chin.
- Darby Translation (DBY)
- And he changed his behaviour before them, and feigned himself mad in their hands, and scratched on the doors of the gate, and let his spittle fall down on his beard.
- Webster's Bible (WBS)
- And he changed his behavior before them, and feigned himself mad in their hands, and scrabbled on the doors of the gate, and let his spittle fall down upon his beard.
- Young's Literal Translation (YLT)
- and changeth his behaviour before their eyes, and feigneth himself mad in their hand, and scribbleth on the doors of the gate, and letteth down his spittle unto his beard.
Read in context
- 11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
- 12ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ
- 13ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
- 14ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಈ ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
- 15ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
Cross references
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Ecclesiastes 7:7 ಪ್ರಸಂಗಿ 7:7ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ.
- Psalm 34:1–22 ಕೀರ್ತನೆಗಳು 34:1–22ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು. ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು. ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು. ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ. ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು. ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ. ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು. ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ. ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು. ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು? ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ. ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು. ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ. ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ. ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ. ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ. ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ. ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ. ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.