1 Samuel · chapter 22 · verse 1
1 Samuel 22:1 in Kannada
ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
Daaveedanu aa sthaladinda tappisikondu adullaamemba gavige bandanu. Ee vartamaanavannu avana sahodararoo avana tandeya maneyavarellaroo keli avana balige bandaru.
1 Samuel 22:1 in English
- King James Version (KJV)
- David therefore departed thence, and escaped to the cave Adullam: and when his brethren and all his father’s house heard [it], they went down thither to him.
- World English Bible (WEB)
- David therefore departed from there and escaped to Adullam’s cave. When his brothers and all his father’s house heard it, they went down there to him.
- American Standard Version (ASV)
- David therefore departed thence, and escaped to the cave of Adullam: and when his brethren and all his father’s house heard it, they went down thither to him.
- Bible in Basic English (BBE)
- So David went away from there and took cover in a strong place at Adullam; and his brothers and all his father's people, hearing of it, went down to him there.
- Darby Translation (DBY)
- And David departed thence, and escaped to the cave of Adullam. And his brethren and all his father's house heard [it], and they went down thither to him.
- Webster's Bible (WBS)
- David therefore departed thence, and escaped to the cave Adullam: and when his brethren and all his father's house heard [it] , they went down thither to him.
- Young's Literal Translation (YLT)
- And David goeth thence, and is escaped unto the cave of Adullam, and his brethren hear, and all the house of his father, and go down unto him thither;
Read in context
- 1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
- 2ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
- 3ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
Cross references
- Psalm 57:1–11 ಕೀರ್ತನೆಗಳು 57:1–11ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ. ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ. ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು. ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ. ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ. ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ. ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು. ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು. ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು. ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ. ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- Psalm 142:1–7 ಕೀರ್ತನೆಗಳು 142:1–7ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ. ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ. ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ. ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ. ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ. ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Psalm 34:1 ಕೀರ್ತನೆಗಳು 34:1ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
- 1 Chronicles 11:15 1 ಪೂರ್ವಕಾಲವೃತ್ತಾಂತ 11:15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
- Joshua 12:15 ಯೆಹೋಶುವ 12:15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
- Hebrews 11:38 ಇಬ್ರಿಯರಿಗೆ 11:38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- Micah 1:3 ಮೀಕ 1:3ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.
- Micah 1:15 ಮೀಕ 1:15ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
- 1 Samuel 21:10–15 1 ಸಮುವೇಲನು 21:10–15ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು. ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು. ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು. ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಈ ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು. ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
- 2 Samuel 23:13–14 2 ಸಮುವೇಲನು 23:13–14ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು. ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- Joshua 15:35 ಯೆಹೋಶುವ 15:35ತಪ್ವೂಹ, ಏನಾಮ್ ಯರ್ಮೂತ್,