1 Samuel · chapter 22 · verse 2
1 Samuel 22:2 in Kannada
ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
Idallade shramepattavaroo saalagaararoo truptiyilladavaroo avana sangada koodikondaru. Aaga avarige daaveedanu adhipatiyaadanu, hechchu kadime naanooru janaru avana baliyalli iddaru.
1 Samuel 22:2 in English
- King James Version (KJV)
- And every one [that was] in distress, and every one that [was] in debt, and every one [that was] discontented, gathered themselves unto him; and he became a captain over them: and there were with him about four hundred men.
- World English Bible (WEB)
- Everyone who was in distress, everyone who was in debt, and everyone who was discontented gathered themselves to him; and he became captain over them. There were with him about four hundred men.
- American Standard Version (ASV)
- And every one that was in distress, and every one that was in debt, and every one that was discontented, gathered themselves unto him; and he became captain over them: and there were with him about four hundred men.
- Bible in Basic English (BBE)
- And everyone who was in trouble, and everyone who was in debt, and everyone who was bitter in soul, came together to him, and he became captain over them: about four hundred men were joined to him.
- Darby Translation (DBY)
- And every one in distress, and every one that was in debt, and every one of embittered spirit collected round him; and he became a captain over them; and there were with him about four hundred men.
- Webster's Bible (WBS)
- And every one [that was] in distress, and every one that [was] in debt, and every one [that was] discontented, resorted to him; and he became a captain over them: and there were with him about four hundred men.
- Young's Literal Translation (YLT)
- and gather themselves unto him do every man in distress, and every man who hath an exactor, and every man bitter in soul, and he is over them for head, and there are with him about four hundred men.
Read in context
- 1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
- 2ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
- 3ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
- 4ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
Cross references
- Matthew 11:28 ಮತ್ತಾಯನು 11:28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
- Psalm 72:12–14 ಕೀರ್ತನೆಗಳು 72:12–14ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- 1 Samuel 25:13 1 ಸಮುವೇಲನು 25:13ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
- 1 Samuel 1:10 1 ಸಮುವೇಲನು 1:10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
- 1 Samuel 30:22–24 1 ಸಮುವೇಲನು 30:22–24ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು. ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು? ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
- 1 Samuel 30:6 1 ಸಮುವೇಲನು 30:6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
- 1 Samuel 25:15–16 1 ಸಮುವೇಲನು 25:15–16ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ. ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು.
- Judges 11:3 ನ್ಯಾಯಸ್ಥಾಪಕರು 11:3ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
- Matthew 18:25–34 ಮತ್ತಾಯನು 18:25–34ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು. ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು. ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು. ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು. ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು. ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು. ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು. ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು. ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
- 1 Samuel 9:16 1 ಸಮುವೇಲನು 9:16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- 1 Samuel 23:13 1 ಸಮುವೇಲನು 23:13ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
- 2 Samuel 5:2 2 ಸಮುವೇಲನು 5:2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.