1 Samuel · chapter 26 · verse 23
1 Samuel 26:23 in Kannada
ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
Aadare kartanu pratiyo bbanige avana neetigoo avana nambigastikegoo takka phalavannu kodali. Kartanu ee hottu ninnannu nanna kaiyalli oppisikottanu. Aadare naanu kartana abhishiktana mele nanna kaichaachalu manassi llade iddenu.
1 Samuel 26:23 in English
- King James Version (KJV)
- The LORD render to every man his righteousness and his faithfulness: for the LORD delivered thee into [my] hand to day, but I would not stretch forth mine hand against the LORD’s anointed.
- World English Bible (WEB)
- The LORD will give to every man his righteousness and his faithfulness; because the LORD delivered you into my hand today, and I wouldn’t stretch out my hand against the LORD’s anointed.
- American Standard Version (ASV)
- And Jehovah will render to every man his righteousness and his faithfulness; forasmuch as Jehovah delivered thee into my hand to-day, and I would not put forth my hand against Jehovah’s anointed.
- Bible in Basic English (BBE)
- And the Lord will give to every man the reward of his righteousness and his faith: because the Lord gave you into my hands today, and I would not put out my hand against the man who has been marked with the holy oil.
- Darby Translation (DBY)
- And Jehovah will render to every man his righteousness and his faithfulness; for Jehovah gave thee into [my] hand this day, and I would not stretch forth my hand against Jehovah's anointed.
- Webster's Bible (WBS)
- The LORD render to every man his righteousness and his faithfulness: for the LORD delivered thee into [my] hand to-day, but I would not stretch forth my hand against the LORD'S anointed.
- Young's Literal Translation (YLT)
- and Jehovah doth turn back to each his righteousness and his faithfulness, in that Jehovah hath given thee to-day into [my] hand, and I have not been willing to put forth my hand against the anointed of Jehovah,
Read in context
- 21ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
- 22ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.
- 23ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
- 24ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 25ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Cross references
- 1 Samuel 24:6–7 1 ಸಮುವೇಲನು 24:6–7ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು. ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
- Psalm 62:12 ಕೀರ್ತನೆಗಳು 62:12ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Psalm 18:20–26 ಕೀರ್ತನೆಗಳು 18:20–26ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು. ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ. ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು. ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು. ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- Psalm 7:8–9 ಕೀರ್ತನೆಗಳು 7:8–9ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು. ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- Nehemiah 13:14 ನೆಹೆಮೀಯ 13:14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
- 1 Samuel 26:9 1 ಸಮುವೇಲನು 26:9ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
- 1 Samuel 26:11 1 ಸಮುವೇಲನು 26:11ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
- 1 Kings 8:32 1 ಅರಸುಗಳು 8:32ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.