1 Samuel · chapter 28 · verse 6
1 Samuel 28:6 in Kannada
ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
Saulanu kartanannu kelikondaaga kartanu avanige svapnaga lindalaadaroo ooreeminindalaadaroo pravaadi galindalaadaroo pratyuttarakodalilla.
1 Samuel 28:6 in English
- King James Version (KJV)
- And when Saul enquired of the LORD, the LORD answered him not, neither by dreams, nor by Urim, nor by prophets.
- World English Bible (WEB)
- When Saul inquired of the LORD, the LORD didn’t answer him by dreams, by Urim, or by prophets.
- American Standard Version (ASV)
- And when Saul inquired of Jehovah, Jehovah answered him not, neither by dreams, nor by Urim, nor by prophets.
- Bible in Basic English (BBE)
- And when Saul went for directions to the Lord, the Lord gave him no answer, by a dream or by the Urim or by the prophets.
- Darby Translation (DBY)
- And Saul inquired of Jehovah; but Jehovah did not answer him, either by dreams, or by Urim, or by prophets.
- Webster's Bible (WBS)
- And when Saul inquired of the LORD, the LORD answered him not, neither by dreams, nor by Urim, nor by prophets.
- Young's Literal Translation (YLT)
- and Saul asketh at Jehovah, and Jehovah hath not answered him, either by dreams, or by Urim, or by prophets.
Read in context
- 4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
- 5ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
- 6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
- 7ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
- 8ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
Cross references
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- 1 Samuel 14:37 1 ಸಮುವೇಲನು 14:37ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
- Lamentations 2:9 ಪ್ರಲಾಪಗಳು 2:9ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- Ezekiel 20:1–3 ಯೆಹೆಜ್ಕೇಲನು 20:1–3ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು. ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ, ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Deuteronomy 33:8 ಧರ್ಮೋಪದೇಶಕಾಂಡ 33:8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- Exodus 28:30 ವಿಮೋಚನಕಾಂಡ 28:30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
- Jeremiah 23:28 ಯೆರೆಮೀಯ 23:28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
- John 9:31 ಯೋಹಾನನು 9:31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
- Psalm 74:9 ಕೀರ್ತನೆಗಳು 74:9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
- Matthew 1:20 ಮತ್ತಾಯನು 1:20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.