1 Samuel · chapter 3 · verse 12
1 Samuel 3:12 in Kannada
ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
Naanu eliya maneyannu kuritu heliddannellaa avarige aa divasadalli maaduttene; naanu aarambhisida haage antya vannu maaduvenu.
1 Samuel 3:12 in English
- King James Version (KJV)
- In that day I will perform against Eli all [things] which I have spoken concerning his house: when I begin, I will also make an end.
- World English Bible (WEB)
- In that day I will perform against Eli all that I have spoken concerning his house, from the beginning even to the end.
- American Standard Version (ASV)
- In that day I will perform against Eli all that I have spoken concerning his house, from the beginning even unto the end.
- Bible in Basic English (BBE)
- In that day I will do to Eli everything which I have said about his family, from first to last.
- Darby Translation (DBY)
- In that day I will perform against Eli all that I have spoken concerning his house; I will begin and make an end.
- Webster's Bible (WBS)
- In that day I will perform against Eli all [things] which I have spoken concerning his house: when I begin, I will also make an end.
- Young's Literal Translation (YLT)
- In that day I establish unto Eli all that I have spoken unto his house, beginning and completing;
Read in context
- 10ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
- 11ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;
- 12ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
- 13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
- 14ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
Cross references
- 1 Samuel 2:27–36 1 ಸಮುವೇಲನು 2:27–36ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ? ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ? ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು? ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು. ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು. ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ. ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು. ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು. ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು. ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Joshua 23:15 ಯೆಹೋಶುವ 23:15ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?