1 Samuel · chapter 30 · verse 23
1 Samuel 30:23 in Kannada
ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
Adakke daaveedanu--nanna sahodarare, nammannu kaapaadi namage virodhavaagi banda ee gumpannu namma kaiyalli oppisi kotta kartanu namage kottaddakke neevu haage maadabediri. Ee kaaryakkoskara nimma maatannu yaaru keluvaru?
1 Samuel 30:23 in English
- King James Version (KJV)
- Then said David, Ye shall not do so, my brethren, with that which the LORD hath given us, who hath preserved us, and delivered the company that came against us into our hand.
- World English Bible (WEB)
- Then David said, “Do not do so, my brothers, with that which the LORD has given to us, who has preserved us, and delivered the troop that came against us into our hand.
- American Standard Version (ASV)
- Then said David, Ye shall not do so, my brethren, with that which Jehovah hath given unto us, who hath preserved us, and delivered the troop that came against us into our hand.
- Bible in Basic English (BBE)
- Then David said, You are not to do this, my brothers, after what the Lord has given us, who has kept us safe and given up the band which came against us into our hands.
- Darby Translation (DBY)
- Then said David, Ye shall not do so, my brethren, with that which Jehovah has given us, who has preserved us, and given the troop that came against us into our hand.
- Webster's Bible (WBS)
- Then said David, Ye shall not do so, my brethren, with that which the LORD hath given us, who hath preserved us, and delivered the company that came against us into our hand.
- Young's Literal Translation (YLT)
- And David saith, 'Ye do not do so, my brethren, with that which Jehovah hath given to us, and He doth preserve us, and doth give the troop which cometh against us into our hand;
Read in context
- 21ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
- 22ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.
- 23ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
- 24ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
- 25ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
Cross references
- Deuteronomy 8:18 ಧರ್ಮೋಪದೇಶಕಾಂಡ 8:18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- Psalm 44:2–7 ಕೀರ್ತನೆಗಳು 44:2–7ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ. ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು. ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು. ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ. ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
- Psalm 121:7–8 ಕೀರ್ತನೆಗಳು 121:7–8ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು. ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Numbers 31:49–54 ಅರಣ್ಯಕಾಂಡ 31:49–54ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ. ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು. ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು. ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು. ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು. ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
- Acts 7:2 ಅಪೊಸ್ತಲರ ಕೃತ್ಯಗಳು 7:2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- Acts 22:1 ಅಪೊಸ್ತಲರ ಕೃತ್ಯಗಳು 22:1ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
- Judges 19:23 ನ್ಯಾಯಸ್ಥಾಪಕರು 19:23ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
- Deuteronomy 8:10 ಧರ್ಮೋಪದೇಶಕಾಂಡ 8:10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- Genesis 19:7 ಆದಿಕಾಂಡ 19:7ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.
- 1 Samuel 2:7 1 ಸಮುವೇಲನು 2:7ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
- 1 Chronicles 29:12–14 1 ಪೂರ್ವಕಾಲವೃತ್ತಾಂತ 29:12–14ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- Habakkuk 1:16 ಹಬಕ್ಕೂಕ 1:16ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?