1 Samuel · chapter 8 · verse 3
1 Samuel 8:3 in Kannada
ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
Aadare avana makkalu avana maargadalli nadeyade lobhakkaagi maargatappi lanchavannu takkondu nyaayavannu tappisidaru.
1 Samuel 8:3 in English
- King James Version (KJV)
- And his sons walked not in his ways, but turned aside after lucre, and took bribes, and perverted judgment.
- World English Bible (WEB)
- His sons didn’t walk in his ways, but turned away after dishonest gain, took bribes, and perverted justice.
- American Standard Version (ASV)
- And his sons walked not in his ways, but turned aside after lucre, and took bribes, and perverted justice.
- Bible in Basic English (BBE)
- And his sons did not go in his ways, but moved by the love of money took rewards, and were not upright in judging.
- Darby Translation (DBY)
- And his sons walked not in his ways, but turned aside after lucre, and took bribes, and perverted justice.
- Webster's Bible (WBS)
- And his sons walked not in his ways, but turned aside after lucre, and took bribes, and perverted judgment.
- Young's Literal Translation (YLT)
- and his sons have not walked in his ways, and turn aside after the dishonest gain, and take a bribe, and turn aside judgment.
Read in context
- 1ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು.
- 2ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
- 3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
- 4ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು
- 5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
Cross references
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Psalm 15:5 ಕೀರ್ತನೆಗಳು 15:5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Exodus 23:8 ವಿಮೋಚನಕಾಂಡ 23:8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- Isaiah 33:15 ಯೆಶಾಯ 33:15ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
- 1 Timothy 3:3 1 ತಿಮೊಥೆಯನಿಗೆ 3:3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- 2 Samuel 15:4 2 ಸಮುವೇಲನು 15:4ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
- Ecclesiastes 2:19 ಪ್ರಸಂಗಿ 2:19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- Jeremiah 22:15–17 ಯೆರೆಮೀಯ 22:15–17ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- 1 Kings 12:6–11 1 ಅರಸುಗಳು 12:6–11ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು. ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು. ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು. ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು. ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ-- ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.
- 2 Kings 21:1–3 2 ಅರಸುಗಳು 21:1–3ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಅವನು ಐವತ್ತೈದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ. ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.