1 Thessalonians · chapter 1 · verse 4
1 Thessalonians 1:4 in Kannada
ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.
Priya sahodarare, devaru nimmannu aadukondi ddaanembaddannu ballevu.
1 Thessalonians 1:4 in English
- King James Version (KJV)
- Knowing, brethren beloved, your election of God.
- World English Bible (WEB)
- We know, brothers loved by God, that you are chosen,
- American Standard Version (ASV)
- knowing, brethren beloved of God, your election,
- Bible in Basic English (BBE)
- Being conscious, my brothers, dear to God, that you have been marked out by God's purpose;
- Darby Translation (DBY)
- knowing, brethren beloved by God, your election.
- Webster's Bible (WBS)
- Knowing, brethren beloved by God, your election.
- Young's Literal Translation (YLT)
- having known, brethren beloved, by God, your election,
Read in context
- 2ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
- 3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
- 4ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.
- 5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- 6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
Cross references
- 2 Thessalonians 2:13 2 ಥೆಸಲೊನೀಕದವರಿಗೆ 2:13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
- Titus 3:4–5 ತೀತನಿಗೆ 3:4–5ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Romans 9:25 ರೋಮಾಪುರದವರಿಗೆ 9:25ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- Ephesians 2:4–5 ಎಫೆಸದವರಿಗೆ 2:4–5ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Ephesians 1:4 ಎಫೆಸದವರಿಗೆ 1:4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- Romans 8:28–30 ರೋಮಾಪುರದವರಿಗೆ 8:28–30ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- Philippians 1:6–7 ಫಿಲಿಪ್ಪಿಯವರಿಗೆ 1:6–7ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು. ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
- Romans 11:5–7 ರೋಮಾಪುರದವರಿಗೆ 11:5–7ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.