1 Thessalonians · chapter 2 · verse 11
1 Thessalonians 2:11 in Kannada
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
Tandeyu tanna makkalige hego haageye naavu nimmalli pratiyobbanige buddi heluttaa aadarisuttaa bandevu.
1 Thessalonians 2:11 in English
- King James Version (KJV)
- As ye know how we exhorted and comforted and charged every one of you, as a father [doth] his children,
- World English Bible (WEB)
- As you know, we exhorted, comforted, and implored every one of you, as a father does his own children,
- American Standard Version (ASV)
- as ye know how we [dealt with] each one of you, as a father with his own children, exhorting you, and encouraging [you], and testifying,
- Bible in Basic English (BBE)
- Even as you saw how, like a father with his children, we were teaching and comforting you all, and giving witness,
- Darby Translation (DBY)
- as ye know how, as a father his own children, we used to exhort each one of you, and comfort and testify,
- Webster's Bible (WBS)
- As ye know how we exhorted, and comforted, and charged every one of you, as a father [doth] his children,
- Young's Literal Translation (YLT)
- even as ye have known, how each one of you, as a father his own children, we are exhorting you, and comforting, and testifying,
Read in context
- 9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- 10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- 12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- 13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
Cross references
- 1 Corinthians 4:14–15 1 ಕೊರಿಂಥದವರಿಗೆ 4:14–15ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- Hebrews 13:22 ಇಬ್ರಿಯರಿಗೆ 13:22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
- 2 Thessalonians 3:12 2 ಥೆಸಲೊನೀಕದವರಿಗೆ 3:12ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- 2 Timothy 4:1–2 2 ತಿಮೊಥೆಯನಿಗೆ 4:1–2ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- 1 Timothy 5:21 1 ತಿಮೊಥೆಯನಿಗೆ 5:21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- 1 Thessalonians 2:7 1 ಥೆಸಲೊನೀಕದವರಿಗೆ 2:7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- Deuteronomy 3:28 ಧರ್ಮೋಪದೇಶಕಾಂಡ 3:28ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
- 1 Chronicles 28:20 1 ಪೂರ್ವಕಾಲವೃತ್ತಾಂತ 28:20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- 1 Timothy 5:7 1 ತಿಮೊಥೆಯನಿಗೆ 5:7ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.
- Proverbs 7:24 ಜ್ಞಾನೋಕ್ತಿಗಳು 7:24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
Original words (Greek)
- As · G2509καθάπερ katháper
- know · G1492εἴδω eídō
- how · G5613ὡς hōs
- exhorted · G3870παρακαλέω parakaléō
- and · G2532καί kaí
- comforted · G3888παραμυθέομαι paramythéomai
- and · G2532καί kaí
- charged · G3140μαρτυρέω martyréō
- every · G1538ἕκαστος hékastos
- one · G1520εἷς heîs
- you · G5216ὑμῶν hymōn
- as · G5613ὡς hōs
- father · G3962πατήρ patḗr
- his · G1438ἑαυτοῦ heautoû
- children · G5043τέκνον téknon