1 Thessalonians · chapter 2 · verse 7
1 Thessalonians 2:7 in Kannada
ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
Daadiyu tanna makkalannu poshisuvante naavu nimma madhyadalli saumyadindiddevu.
1 Thessalonians 2:7 in English
- King James Version (KJV)
- But we were gentle among you, even as a nurse cherisheth her children:
- World English Bible (WEB)
- But we were gentle among you, like a nursing mother cherishes her own children.
- American Standard Version (ASV)
- But we were gentle in the midst of you, as when a nurse cherisheth her own children:
- Bible in Basic English (BBE)
- But we were gentle among you, like a woman caring for her little ones:
- Darby Translation (DBY)
- but have been gentle in the midst of you, as a nurse would cherish her own children.
- Webster's Bible (WBS)
- But we were gentle among you, even as a nurse cherisheth her children:
- Young's Literal Translation (YLT)
- But we became gentle in your midst, as a nurse may cherish her own children,
Read in context
- 5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
- 6ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
- 7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- 8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
- 9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
Cross references
- Isaiah 66:13 ಯೆಶಾಯ 66:13ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
- 2 Timothy 2:24–25 2 ತಿಮೊಥೆಯನಿಗೆ 2:24–25ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- 1 Thessalonians 2:11 1 ಥೆಸಲೊನೀಕದವರಿಗೆ 2:11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 2 Corinthians 10:1 2 ಕೊರಿಂಥದವರಿಗೆ 10:1ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- 1 Corinthians 9:22 1 ಕೊರಿಂಥದವರಿಗೆ 9:22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- Ezekiel 34:14–16 ಯೆಹೆಜ್ಕೇಲನು 34:14–16ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು. ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- 1 Corinthians 2:3 1 ಕೊರಿಂಥದವರಿಗೆ 2:3ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
- Matthew 11:29–30 ಮತ್ತಾಯನು 11:29–30ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Genesis 33:13–14 ಆದಿಕಾಂಡ 33:13–14ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು. ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.