1 Thessalonians · chapter 4 · verse 7
1 Thessalonians 4:7 in Kannada
ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
Devaru nammannu ashuddhatege kareyade shuddhatege karedanu.
1 Thessalonians 4:7 in English
- King James Version (KJV)
- For God hath not called us unto uncleanness, but unto holiness.
- World English Bible (WEB)
- For God called us not for uncleanness, but in sanctification.
- American Standard Version (ASV)
- For God called us not for uncleanness, but in sanctification.
- Bible in Basic English (BBE)
- Because it is God's purpose that our way of life may be not unclean but holy.
- Darby Translation (DBY)
- For God has not called us to uncleanness, but in sanctification.
- Webster's Bible (WBS)
- For God hath not called us to uncleanness, but to holiness.
- Young's Literal Translation (YLT)
- for God did not call us on uncleanness, but in sanctification;
Read in context
- 5ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
- 6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- 7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- 8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 9ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
Cross references
- Leviticus 11:44 ಯಾಜಕಕಾಂಡ 11:44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
- 1 Peter 2:9–12 1 ಪೇತ್ರನು 2:9–12ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ. ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Ephesians 1:4 ಎಫೆಸದವರಿಗೆ 1:4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- 1 Peter 1:14–16 1 ಪೇತ್ರನು 1:14–16ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- 1 Peter 2:21–22 1 ಪೇತ್ರನು 2:21–22ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
- Romans 8:29–30 ರೋಮಾಪುರದವರಿಗೆ 8:29–30ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Leviticus 19:2 ಯಾಜಕಕಾಂಡ 19:2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Galatians 5:19 ಗಲಾತ್ಯದವರಿಗೆ 5:19ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.