1 Thessalonians · chapter 5 · verse 10
1 Thessalonians 5:10 in Kannada
ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
Naavu echcharavaagi ddaroo sariye, nidreyalliddaroo sariye, tanna joteyalliye naavu jeevisabekendu aatanu namagoskara sattanu.
1 Thessalonians 5:10 in English
- King James Version (KJV)
- Who died for us, that, whether we wake or sleep, we should live together with him.
- World English Bible (WEB)
- who died for us, that, whether we wake or sleep, we should live together with him.
- American Standard Version (ASV)
- who died for us, that, whether we wake or sleep, we should live together with him.
- Bible in Basic English (BBE)
- Who was put to death for us, so that, awake or sleeping, we may have a part in his life.
- Darby Translation (DBY)
- who has died for us, that whether we may be watching or sleep, we may live together with him.
- Webster's Bible (WBS)
- Who died for us, that, whether we wake or sleep, we should live together with him.
- Young's Literal Translation (YLT)
- who did die for us, that whether we wake — whether we sleep — together with him we may live;
Read in context
- 8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- 9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
- 10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- 11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- 12ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
Cross references
- Romans 14:8–9 ರೋಮಾಪುರದವರಿಗೆ 14:8–9ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 2 Corinthians 5:15 2 ಕೊರಿಂಥದವರಿಗೆ 5:15ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- John 15:13 ಯೋಹಾನನು 15:13ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Romans 5:6–8 ರೋಮಾಪುರದವರಿಗೆ 5:6–8ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 1 Thessalonians 4:17 1 ಥೆಸಲೊನೀಕದವರಿಗೆ 4:17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.