1 Thessalonians · chapter 5 · verse 20
1 Thessalonians 5:20 in Kannada
ಪ್ರವಾದನೆಗಳನ್ನು ಹೀನೈಸಬೇಡಿರಿ;
Pravaadanegalannu heenaisabediri;
1 Thessalonians 5:20 in English
- King James Version (KJV)
- Despise not prophesyings.
- World English Bible (WEB)
- Don’t despise prophecies.
- American Standard Version (ASV)
- despise not prophesyings;
- Bible in Basic English (BBE)
- Do not make little of the words of the prophets;
- Darby Translation (DBY)
- do not lightly esteem prophecies;
- Webster's Bible (WBS)
- Despise not prophesyings.
- Young's Literal Translation (YLT)
- prophesyings despise not;
Read in context
- 18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- 19ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
- 20ಪ್ರವಾದನೆಗಳನ್ನು ಹೀನೈಸಬೇಡಿರಿ;
- 21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- 22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
Cross references
- 1 Corinthians 14:3–6 1 ಕೊರಿಂಥದವರಿಗೆ 14:3–6ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ. ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ. ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ. ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
- 1 Corinthians 14:1 1 ಕೊರಿಂಥದವರಿಗೆ 14:1ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
- 1 Corinthians 11:4 1 ಕೊರಿಂಥದವರಿಗೆ 11:4ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.
- Numbers 11:25–29 ಅರಣ್ಯಕಾಂಡ 11:25–29ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ. ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು. ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು. ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು. ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
- 1 Corinthians 14:37–39 1 ಕೊರಿಂಥದವರಿಗೆ 14:37–39ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ. ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ. ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 1 Corinthians 14:22–25 1 ಕೊರಿಂಥದವರಿಗೆ 14:22–25ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ. ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ? ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ. ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- Acts 19:6 ಅಪೊಸ್ತಲರ ಕೃತ್ಯಗಳು 19:6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
- 1 Corinthians 14:29–32 1 ಕೊರಿಂಥದವರಿಗೆ 14:29–32ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ. ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ. ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು. ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Ephesians 4:11–12 ಎಫೆಸದವರಿಗೆ 4:11–12ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- 1 Samuel 19:20–24 1 ಸಮುವೇಲನು 19:20–24ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು. ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು. ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು. ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು. ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
- 1 Corinthians 13:2 1 ಕೊರಿಂಥದವರಿಗೆ 13:2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.