1 Thessalonians · chapter 5 · verse 21
1 Thessalonians 5:21 in Kannada
ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
Aadare ellavannu parishodhisi olledanne bhadravaagi hididukolliri.
1 Thessalonians 5:21 in English
- King James Version (KJV)
- Prove all things; hold fast that which is good.
- World English Bible (WEB)
- Test all things, and hold firmly that which is good.
- American Standard Version (ASV)
- prove all things; hold fast that which is good;
- Bible in Basic English (BBE)
- Let all things be tested; keep to what is good;
- Darby Translation (DBY)
- but prove all things, hold fast the right;
- Webster's Bible (WBS)
- Prove all things; hold fast that which is good.
- Young's Literal Translation (YLT)
- all things prove; that which is good hold fast;
Read in context
- 19ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
- 20ಪ್ರವಾದನೆಗಳನ್ನು ಹೀನೈಸಬೇಡಿರಿ;
- 21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- 22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- 23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
Cross references
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Ephesians 5:10 ಎಫೆಸದವರಿಗೆ 5:10ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
- Luke 12:57 ಲೂಕನು 12:57ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- 1 Corinthians 2:14–15 1 ಕೊರಿಂಥದವರಿಗೆ 2:14–15ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Philippians 3:16 ಫಿಲಿಪ್ಪಿಯವರಿಗೆ 3:16ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
- Matthew 7:15–20 ಮತ್ತಾಯನು 7:15–20ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ. ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ? ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ; ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು. ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ. ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.