1 Thessalonians · chapter 5 · verse 25
1 Thessalonians 5:25 in Kannada
ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
Sahodarare, namagoskara praarthane maadiri.
1 Thessalonians 5:25 in English
- King James Version (KJV)
- Brethren, pray for us.
- World English Bible (WEB)
- Brothers, pray for us.
- American Standard Version (ASV)
- Brethren, pray for us.
- Bible in Basic English (BBE)
- Brothers, keep us in mind in your prayers.
- Darby Translation (DBY)
- Brethren, pray for us.
- Webster's Bible (WBS)
- Brethren, pray for us.
- Young's Literal Translation (YLT)
- Brethren, pray for us;
Read in context
- 23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
- 24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
- 25ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
- 26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
- 27ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
- Philippians 1:19 ಫಿಲಿಪ್ಪಿಯವರಿಗೆ 1:19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
- Hebrews 13:18–19 ಇಬ್ರಿಯರಿಗೆ 13:18–19ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ. ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
- Philemon 1:22 ಫಿಲೆಮೋನನಿಗೆ 1:22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
- 2 Corinthians 1:11 2 ಕೊರಿಂಥದವರಿಗೆ 1:11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
- Colossians 4:3 ಕೊಲೊಸ್ಸೆಯವರಿಗೆ 4:3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
- Ephesians 6:18–20 ಎಫೆಸದವರಿಗೆ 6:18–20ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Romans 15:30 ರೋಮಾಪುರದವರಿಗೆ 15:30ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 2 Thessalonians 3:1–3 2 ಥೆಸಲೊನೀಕದವರಿಗೆ 3:1–3ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ. ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.