Skip to content
ThuthiThuthiThuthi
1 Timothy · chapter 3 of 6 · 16 verses

1 Timothy 3 in Kannada

1 ತಿಮೊಥೆಯನಿಗೆ 3

  1. ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.

    This [is] a true saying, If a man desire the office of a bishop, he desireth a good work.

  2. ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.

    A bishop then must be blameless, the husband of one wife, vigilant, sober, of good behaviour, given to hospitality, apt to teach;

  3. ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.

    Not given to wine, no striker, not greedy of filthy lucre; but patient, not a brawler, not covetous;

  4. ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.

    One that ruleth well his own house, having his children in subjection with all gravity;

  5. (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?

    (For if a man know not how to rule his own house, how shall he take care of the church of God?)

  6. ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.

    Not a novice, lest being lifted up with pride he fall into the condemnation of the devil.

  7. ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.

    Moreover he must have a good report of them which are without; lest he fall into reproach and the snare of the devil.

  8. ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ

    Likewise [must] the deacons [be] grave, not doubletongued, not given to much wine, not greedy of filthy lucre;

  9. ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.

    Holding the mystery of the faith in a pure conscience.

  10. ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.

    And let these also first be proved; then let them use the office of a deacon, being [found] blameless.

  11. ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.

    Even so [must their] wives [be] grave, not slanderers, sober, faithful in all things.

  12. ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.

    Let the deacons be the husbands of one wife, ruling their children and their own houses well.

  13. ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

    For they that have used the office of a deacon well purchase to themselves a good degree, and great boldness in the faith which is in Christ Jesus.

  14. ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

    These things write I unto thee, hoping to come unto thee shortly:

  15. ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

    But if I tarry long, that thou mayest know how thou oughtest to behave thyself in the house of God, which is the church of the living God, the pillar and ground of the truth.

  16. ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

    And without controversy great is the mystery of godliness: God was manifest in the flesh, justified in the Spirit, seen of angels, preached unto the Gentiles, believed on in the world, received up into glory.

All chapters of 1 Timothy · Kannada Bible · 1 Timothy 3 in Tamil

Kannada Bible: Kannada Old Version, public domain.

King James Version: public domain.