1 Timothy · chapter 4 · verse 14
1 Timothy 4:14 in Kannada
ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
Ninnalliruva varavannu alakshyamaadabeda; sabheya hiriyaru pravaadaneyinda ninna mele hastagalannittaaga adu ninage kodalpattitallaa.
1 Timothy 4:14 in English
- King James Version (KJV)
- Neglect not the gift that is in thee, which was given thee by prophecy, with the laying on of the hands of the presbytery.
- World English Bible (WEB)
- Don’t neglect the gift that is in you, which was given to you by prophecy with the laying on of the hands of the elders.
- American Standard Version (ASV)
- Neglect not the gift that is in thee, which was given thee by prophecy, with the laying on of the hands of the presbytery.
- Bible in Basic English (BBE)
- Make use of that grace in you, which was given to you by the word of the prophets, when the rulers of the church put their hands on you.
- Darby Translation (DBY)
- Be not negligent of the gift [that is] in thee, which has been given to thee through prophecy, with imposition of the hands of the elderhood.
- Webster's Bible (WBS)
- Neglect not the gift that is in thee, which was given thee by prophecy, with the laying on of the hands of the presbytery.
- Young's Literal Translation (YLT)
- be not careless of the gift in thee, that was given thee through prophecy, with laying on of the hands of the eldership;
Read in context
- 12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- 13ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.
- 14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
- 15ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
- 16ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
Cross references
- 2 Timothy 1:6 2 ತಿಮೊಥೆಯನಿಗೆ 1:6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
- 1 Peter 4:9–11 1 ಪೇತ್ರನು 4:9–11ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- Acts 6:6 ಅಪೊಸ್ತಲರ ಕೃತ್ಯಗಳು 6:6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- Acts 13:3 ಅಪೊಸ್ತಲರ ಕೃತ್ಯಗಳು 13:3ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- 1 Thessalonians 5:19 1 ಥೆಸಲೊನೀಕದವರಿಗೆ 5:19ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
- Matthew 25:14–30 ಮತ್ತಾಯನು 25:14–30ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ. ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು. ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು. ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು. ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು. ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು; ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು. ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು. ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ. ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು. ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
- Acts 8:17 ಅಪೊಸ್ತಲರ ಕೃತ್ಯಗಳು 8:17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
- Romans 12:6–8 ರೋಮಾಪುರದವರಿಗೆ 12:6–8ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- Acts 19:6 ಅಪೊಸ್ತಲರ ಕೃತ್ಯಗಳು 19:6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
Original words (Greek)
- Neglect · G272ἀμελέω ameléō
- not · G3361μή mḗ
- gift · G5486χάρισμα chárisma
- in · G1722ἐν en
- thee · G4671σοί soí
- which · G3739ὅς hós
- given · G1325δίδωμι dídōmi
- thee · G4671σοί soí
- by · G1223διά diá
- prophecy · G4394προφητεία prophēteía
- with · G3326μετά metá
- on · G1936ἐπίθεσις epíthesis
- hands · G5495χείρ cheír
- presbytery · G4244πρεσβυτέριον presbytérion