1 Timothy · chapter 6 · verse 19
1 Timothy 6:19 in Kannada
ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
Mundina kaalakke olle astivaaravaaguvantha vugalannu tamage koodisittukollabekentaloo nityajeevavannu hididukolluvavaraagira bekentaloo avarige aajnyaapisu.
1 Timothy 6:19 in English
- King James Version (KJV)
- Laying up in store for themselves a good foundation against the time to come, that they may lay hold on eternal life.
- World English Bible (WEB)
- laying up in store for themselves a good foundation against the time to come, that they may lay hold of eternal life.
- American Standard Version (ASV)
- laying up in store for themselves a good foundation against the time to come, that they may lay hold on the life which is [life] indeed.
- Bible in Basic English (BBE)
- Making ready for themselves a safe place for the time to come, so that the true life may be theirs.
- Darby Translation (DBY)
- laying by for themselves a good foundation for the future, that they may lay hold of [what is] really life.
- Webster's Bible (WBS)
- Laying up in store for themselves a good foundation against the time to come, that they may lay hold on eternal life.
- Young's Literal Translation (YLT)
- treasuring up to themselves a right foundation for the time to come, that they may lay hold on the life age-during.
Read in context
- 17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- 18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- 19ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- 20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 21ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
- Matthew 6:19–21 ಮತ್ತಾಯನು 6:19–21ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ. ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
- 1 Timothy 6:12 1 ತಿಮೊಥೆಯನಿಗೆ 6:12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Luke 16:9 ಲೂಕನು 16:9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- Galatians 6:8–9 ಗಲಾತ್ಯದವರಿಗೆ 6:8–9ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- Proverbs 31:25 ಜ್ಞಾನೋಕ್ತಿಗಳು 31:25ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Philippians 3:14 ಫಿಲಿಪ್ಪಿಯವರಿಗೆ 3:14ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- Matthew 19:21 ಮತ್ತಾಯನು 19:21ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
- Luke 18:22 ಲೂಕನು 18:22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- Matthew 10:41–42 ಮತ್ತಾಯನು 10:41–42ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.