1 Timothy · chapter 6 · verse 7
1 Timothy 6:7 in Kannada
ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.
Naavu lokadolage enoo takkondu baralillavashte; nishchayavaagi adarolaginda enoo takkondu hogalaarevu.
1 Timothy 6:7 in English
- King James Version (KJV)
- For we brought nothing into [this] world, [and it is] certain we can carry nothing out.
- World English Bible (WEB)
- For we brought nothing into the world, and we certainly can’t carry anything out.
- American Standard Version (ASV)
- for we brought nothing into the world, for neither can we carry anything out;
- Bible in Basic English (BBE)
- For we came into the world with nothing, and we are not able to take anything out;
- Darby Translation (DBY)
- For we have brought nothing into the world: [it is] [manifest] that neither can we carry anything out.
- Webster's Bible (WBS)
- For we brought nothing into [this] world, [and it is] certain we can carry nothing out.
- Young's Literal Translation (YLT)
- for nothing did we bring into the world — [it is] manifest that we are able to carry nothing out;
Read in context
- 5ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- 6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
- 7ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.
- 8ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.
- 9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
Cross references
- Job 1:21 ಯೋಬನು 1:21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Psalm 49:17 ಕೀರ್ತನೆಗಳು 49:17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
- Luke 12:20–21 ಲೂಕನು 12:20–21ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Ecclesiastes 5:15–16 ಪ್ರಸಂಗಿ 5:15–16ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ. ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
- Proverbs 27:24 ಜ್ಞಾನೋಕ್ತಿಗಳು 27:24ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
- Luke 16:22–23 ಲೂಕನು 16:22–23ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.