2 Chronicles · chapter 1 · verse 7
2 Chronicles 1:7 in Kannada
ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.
Ade raatriyalli devaru solomonanige kaanisikondu--naanu ninage kodabekaadaddannu keliko andanu.
2 Chronicles 1:7 in English
- King James Version (KJV)
- In that night did God appear unto Solomon, and said unto him, Ask what I shall give thee.
- World English Bible (WEB)
- That night, God appeared to Solomon and said to him, “Ask for what you want me to give you.”
- American Standard Version (ASV)
- In that night did God appear unto Solomon, and said unto him, Ask what I shall give thee.
- Bible in Basic English (BBE)
- In that night God came to Solomon in a vision, and said to him, Say what I am to give you.
- Darby Translation (DBY)
- In that night God appeared to Solomon, and said to him, Ask what I shall give thee.
- Webster's Bible (WBS)
- In that night God appeared to Solomon, and said to him, Ask what I shall give thee.
- Young's Literal Translation (YLT)
- In that night hath God appeared to Solomon, and saith to him, 'Ask — what do I give to thee?'
Read in context
- 5ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
- 6ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.
- 7ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.
- 8ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ.
- 9ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ.
Cross references
- Matthew 7:7–8 ಮತ್ತಾಯನು 7:7–8ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- John 16:23 ಯೋಹಾನನು 16:23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Mark 10:51 ಮಾರ್ಕನು 10:51ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- 1 Kings 3:5–15 1 ಅರಸುಗಳು 3:5–15ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು. ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು. ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು. ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ. ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ. ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು. ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
- Mark 10:36–37 ಮಾರ್ಕನು 10:36–37ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.