2 Chronicles · chapter 10 · verse 1
2 Chronicles 10:1 in Kannada
ಆಗ ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
Aaga rehabbaamanu shekemige hodanu; avanannu arasanaagi maaduvadakke samasta israayelyaru shekemige bandaru.
2 Chronicles 10:1 in English
- King James Version (KJV)
- And Rehoboam went to Shechem: for to Shechem were all Israel come to make him king.
- World English Bible (WEB)
- Rehoboam went to Shechem, for all Israel had come to Shechem to make him king.
- American Standard Version (ASV)
- And Rehoboam went to Shechem; for all Israel were come to Shechem to make him king.
- Bible in Basic English (BBE)
- And Rehoboam went to Shechem, where all Israel had come together to make him king.
- Darby Translation (DBY)
- And Rehoboam went to Shechem; for all Israel had come to Shechem to make him king.
- Webster's Bible (WBS)
- And Rehoboam went to Shechem: for to Shechem had all Israel come to make him king.
- Young's Literal Translation (YLT)
- And Rehoboam goeth to Shechem, for [to] Shechem have all Israel come to cause him to reign.
Read in context
- 1ಆಗ ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
- 2ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು.
- 3ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು
Cross references
- 1 Kings 4:1 1 ಅರಸುಗಳು 4:1ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.
- 1 Chronicles 3:10 1 ಪೂರ್ವಕಾಲವೃತ್ತಾಂತ 3:10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- Matthew 1:7 ಮತ್ತಾಯನು 1:7ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;
- 1 Kings 12:1–20 1 ಅರಸುಗಳು 12:1–20ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು. (ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು. ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು. ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು. ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು. ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು. ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು. ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ-- ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು. ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು. ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ-- ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು. ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು. ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು. ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು. ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು. ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 1 Chronicles 12:38 1 ಪೂರ್ವಕಾಲವೃತ್ತಾಂತ 12:38ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
- Genesis 37:12–13 ಆದಿಕಾಂಡ 37:12–13ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು. ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
- Judges 9:1 ನ್ಯಾಯಸ್ಥಾಪಕರು 9:1ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
- Joshua 24:1 ಯೆಹೋಶುವ 24:1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
- Genesis 12:6 ಆದಿಕಾಂಡ 12:6ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.