2 Chronicles · chapter 10 · verse 11
2 Chronicles 10:11 in Kannada
ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
Ninna sangada maatanaadi helida ee janarige neenu heege helabeku--nanna kiru beralu nanna tandeya naduviginta dappavaagiru vadu. Nanna tandeyu nimma mele bhaaravaada nogavannu horisidanu; naanaadaro nimma nogavannu hechchu bhaaravaagi maaduvenu. Nanna tandeyu nimmannu bettagalinda shikshisidanu; aadare naanu nimmannu chelugalinda shikshisuvenu endu helu andaru.
2 Chronicles 10:11 in English
- King James Version (KJV)
- For whereas my father put a heavy yoke upon you, I will put more to your yoke: my father chastised you with whips, but I [will chastise you] with scorpions.
- World English Bible (WEB)
- Now whereas my father burdened you with a heavy yoke, I will add to your yoke. My father chastised you with whips, but I will chastise you with scorpions.’”
- American Standard Version (ASV)
- And now whereas my father did lade you with a heavy yoke, I will add to your yoke: my father chastised you with whips, but I [will chastise you] with scorpions.
- Bible in Basic English (BBE)
- If my father put a hard yoke on you, I will make it harder: my father gave you punishment with whips, but I will give you blows with snakes.
- Darby Translation (DBY)
- and whereas my father laid a heavy yoke upon you, I will add to your yoke: my father chastised you with whips, but I [will chastise you] with scorpions.
- Webster's Bible (WBS)
- For whereas my father put a heavy yoke upon you, I will put more to your yoke: my father chastised you with whips, but I [will chastise you] with scorpions.
- Young's Literal Translation (YLT)
- and now, my father laid on you a heavy yoke, and I — I add unto your yoke; my father chastised you with whips, and I — with scorpions.'
Read in context
- 9ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
- 10ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು
- 11ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
- 12ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
- 13ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--
Cross references
- Revelation 9:3 ಪ್ರಕಟನೆ 9:3ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
- Isaiah 47:6 ಯೆಶಾಯ 47:6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
- Exodus 5:18 ವಿಮೋಚನಕಾಂಡ 5:18ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
- Exodus 5:5–9 ವಿಮೋಚನಕಾಂಡ 5:5–9ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು. ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ-- ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ. ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ. ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
- Jeremiah 28:13–14 ಯೆರೆಮೀಯ 28:13–14ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Exodus 1:13–14 ವಿಮೋಚನಕಾಂಡ 1:13–14ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು. ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- Revelation 9:10 ಪ್ರಕಟನೆ 9:10ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
- 1 Samuel 8:18 1 ಸಮುವೇಲನು 8:18ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
- Luke 10:19 ಲೂಕನು 10:19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
- Isaiah 58:6 ಯೆಶಾಯ 58:6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
- Revelation 9:5 ಪ್ರಕಟನೆ 9:5ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.