2 Chronicles · chapter 10 · verse 13
2 Chronicles 10:13 in Kannada
ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--
Arasanu janarige kathinavaada pratyuttara helidanu; hiriyaru avanige kotta aalochaneyannu bittu yauva nasthara aalochaneya prakaara avara sangada maatanaadi avarige--
2 Chronicles 10:13 in English
- King James Version (KJV)
- And the king answered them roughly; and king Rehoboam forsook the counsel of the old men,
- World English Bible (WEB)
- The king answered them roughly; and King Rehoboam abandoned the counsel of the old men,
- American Standard Version (ASV)
- And the king answered them roughly; and king Rehoboam forsook the counsel of the old men,
- Bible in Basic English (BBE)
- And the king gave them a rough answer. So King Rehoboam gave no attention to the suggestion of the old men,
- Darby Translation (DBY)
- And the king answered them roughly; and king Rehoboam forsook the advice of the old men,
- Webster's Bible (WBS)
- And the king answered them roughly; and king Rehoboam forsook the counsel of the old men,
- Young's Literal Translation (YLT)
- And the king answereth them sharply, and king Rehoboam forsaketh the counsel of the aged men,
Read in context
- 11ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
- 12ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
- 13ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--
- 14ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
- 15ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
Cross references
- Proverbs 19:27 ಜ್ಞಾನೋಕ್ತಿಗಳು 19:27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
- Genesis 42:7 ಆದಿಕಾಂಡ 42:7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
- Genesis 42:30 ಆದಿಕಾಂಡ 42:30ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
- 1 Kings 20:6–11 1 ಅರಸುಗಳು 20:6–11ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು. ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು. ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ-- ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು. ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು. ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- 2 Chronicles 10:8 2 ಪೂರ್ವಕಾಲವೃತ್ತಾಂತ 10:8ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
- 1 Samuel 25:10–11 1 ಸಮುವೇಲನು 25:10–11ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ. ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
- Exodus 10:28 ವಿಮೋಚನಕಾಂಡ 10:28ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.