2 Chronicles · chapter 12 · verse 7
2 Chronicles 12:7 in Kannada
ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
Avaru tammannu taggisi kondaddannu kartanu nodidaaga kartana vaakyavu shemaayanige untaayitu. Enandareavaru tammannu taggisikondaddarinda naanu ava rannu naashamaadade avaru svalpamattige tappisi kolluvante maaduvenu. Sheeshakana kaiyinda nanna kopavu yeroosalemina mele hoyyalpadu vadilla.
2 Chronicles 12:7 in English
- King James Version (KJV)
- And when the LORD saw that they humbled themselves, the word of the LORD came to Shemaiah, saying, They have humbled themselves; [therefore] I will not destroy them, but I will grant them some deliverance; and my wrath shall not be poured out upon Jerusalem by the hand of Shishak.
- World English Bible (WEB)
- When the LORD saw that they humbled themselves, the LORD’s word came to Shemaiah, saying, “They have humbled themselves. I will not destroy them, but I will grant them some deliverance, and my wrath won’t be poured out on Jerusalem by the hand of Shishak.
- American Standard Version (ASV)
- And when Jehovah saw that they humbled themselves, the word of Jehovah came to Shemaiah, saying, They have humbled themselves: I will not destroy them; but I will grant them some deliverance, and my wrath shall not be poured out upon Jerusalem by the hand of Shishak.
- Bible in Basic English (BBE)
- And the Lord, seeing that they had made themselves low, said to Shemaiah, They have made themselves low: I will not send destruction on them, but in a short time I will give them salvation, and will not let loose my wrath on Jerusalem by the hand of Shishak.
- Darby Translation (DBY)
- And when Jehovah saw that they humbled themselves, the word of Jehovah came to Shemaiah, saying, They have humbled themselves: I will not destroy them, but I will grant them a little deliverance; and my wrath shall not be poured out upon Jerusalem by the hand of Shishak.
- Webster's Bible (WBS)
- And when the LORD saw that they humbled themselves, the word of the LORD came to Shemaiah, saying, They have humbled themselves; [therefore] I will not destroy them, but I will grant them some deliverance; and my wrath shall not be poured out upon Jerusalem by the hand of Shishak.
- Young's Literal Translation (YLT)
- And when Jehovah seeth that they have been humbled, a word of Jehovah hath been unto Shemaiah, saying, 'They have been humbled; I do not destroy them, and I have given to them as a little thing for an escape, and I pour not out My fury in Jerusalem by the hand of Shishak;
Read in context
- 5ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
- 6ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
- 7ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
- 8ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
- 9ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
Cross references
- 2 Chronicles 34:25 2 ಪೂರ್ವಕಾಲವೃತ್ತಾಂತ 34:25ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
- Isaiah 42:25 ಯೆಶಾಯ 42:25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- 1 Kings 21:28–29 1 ಅರಸುಗಳು 21:28–29ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು. ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
- Jeremiah 3:13 ಯೆರೆಮೀಯ 3:13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
- Revelation 16:2–17 ಪ್ರಕಟನೆ 16:2–17ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು. ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು. ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು. ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು. ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು. ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು. ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು. ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು. ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು. ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
- 2 Chronicles 34:21 2 ಪೂರ್ವಕಾಲವೃತ್ತಾಂತ 34:21ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
- Revelation 14:10 ಪ್ರಕಟನೆ 14:10ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
- Jeremiah 7:20 ಯೆರೆಮೀಯ 7:20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- Judges 10:15–16 ನ್ಯಾಯಸ್ಥಾಪಕರು 10:15–16ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
- 2 Kings 13:23 2 ಅರಸುಗಳು 13:23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
- Psalm 79:6 ಕೀರ್ತನೆಗಳು 79:6ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
- 2 Kings 13:4–7 2 ಅರಸುಗಳು 13:4–7ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು. ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು. ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು. ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
Original words (Hebrew)
- saw · H7200רָאָה râʼâh
- humbled · H3665כָּנַע kânaʻ
- word · H1697דָּבָר dâbâr
- Shemaiah · H8098שְׁמַעְיָה Shᵉmaʻyâh
- saying · H559אָמַר ʼâmar
- humbled · H3665כָּנַע kânaʻ
- destroy · H7843שָׁחַת shâchath
- grant · H5414נָתַן nâthan
- some · H4592מְעַט mᵉʻaṭ
- deliverance · H6413פְּלֵיטָה pᵉlêyṭâh
- wrath · H2534חֵמָה chêmâh
- out · H5413נָתַךְ nâthak
- Jerusalem · H3389יְרוּשָׁלַ͏ִם Yᵉrûwshâlaim
- hand · H3027יָד yâd
- Shishak · H7895שִׁישַׁק Shîyshaq