2 Chronicles · chapter 14 · verse 4
2 Chronicles 14:4 in Kannada
ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.
Tamma pitrugala devaraada kartanannu hudukaloo nyaayapramaanavannu aajnyeyannu kaikollaloo yehoodyarige aajnyaapi sidanu.
2 Chronicles 14:4 in English
- King James Version (KJV)
- And commanded Judah to seek the LORD God of their fathers, and to do the law and the commandment.
- World English Bible (WEB)
- and commanded Judah to seek the LORD, the God of their fathers, and to obey his law and command.
- American Standard Version (ASV)
- and commanded Judah to seek Jehovah, the God of their fathers, and to do the law and the commandment.
- Bible in Basic English (BBE)
- And he made Judah go after the Lord, the God of their fathers, and keep his laws and his orders.
- Darby Translation (DBY)
- and commanded Judah to seek Jehovah the God of their fathers, and to practise the law and the commandment.
- Webster's Bible (WBS)
- And commanded Judah to seek the LORD God of their fathers, and to do the law and the commandment.
- Young's Literal Translation (YLT)
- and saith to Judah to seek Jehovah, God of their fathers, and to do the law and the command;
Read in context
- 2ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
- 3ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
- 4ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.
- 5ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
- 6ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
Cross references
- Nehemiah 10:29–39 ನೆಹೆಮೀಯ 10:29–39ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ; ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು. ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು. ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು. ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ; ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು; ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು. ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು. ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- 2 Chronicles 30:19 2 ಪೂರ್ವಕಾಲವೃತ್ತಾಂತ 30:19ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
- 2 Chronicles 11:16 2 ಪೂರ್ವಕಾಲವೃತ್ತಾಂತ 11:16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
- 2 Chronicles 30:12 2 ಪೂರ್ವಕಾಲವೃತ್ತಾಂತ 30:12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
- 2 Chronicles 29:21 2 ಪೂರ್ವಕಾಲವೃತ್ತಾಂತ 29:21ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
- Nehemiah 13:9 ನೆಹೆಮೀಯ 13:9ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
- Psalm 101:2–8 ಕೀರ್ತನೆಗಳು 101:2–8ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು. ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು. ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ. ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Psalm 119:10 ಕೀರ್ತನೆಗಳು 119:10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- 2 Chronicles 29:27 2 ಪೂರ್ವಕಾಲವೃತ್ತಾಂತ 29:27ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.
- 2 Chronicles 33:16 2 ಪೂರ್ವಕಾಲವೃತ್ತಾಂತ 33:16ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.