2 Chronicles · chapter 15 · verse 4
2 Chronicles 15:4 in Kannada
ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.
Aadare avaru tamma ikkattinalli israayelina devaraada kartana kadege tirigi aatanannu huduki daaga aatanu avarige sikkidanu.
2 Chronicles 15:4 in English
- King James Version (KJV)
- But when they in their trouble did turn unto the LORD God of Israel, and sought him, he was found of them.
- World English Bible (WEB)
- But when in their distress they turned to the LORD, the God of Israel, and sought him, he was found by them.
- American Standard Version (ASV)
- but when in their distress they turned unto Jehovah, the God of Israel, and sought him, he was found of them.
- Bible in Basic English (BBE)
- But when in their trouble they were turned to the Lord, the God of Israel, searching after him, he let their search be rewarded.
- Darby Translation (DBY)
- but in their trouble they turned to Jehovah the God of Israel, and sought him, and he was found of them.
- Webster's Bible (WBS)
- But when they in their trouble returned to the LORD God of Israel, and sought him, he was found by them.
- Young's Literal Translation (YLT)
- and it turneth back in its distress unto Jehovah, God of Israel, and they seek Him, and He is found of them,
Read in context
- 2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- 3ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.
- 4ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.
- 5ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
- 6ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
Cross references
- Isaiah 55:6 ಯೆಶಾಯ 55:6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- Deuteronomy 4:29–30 ಧರ್ಮೋಪದೇಶಕಾಂಡ 4:29–30ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
- 2 Chronicles 15:15 2 ಪೂರ್ವಕಾಲವೃತ್ತಾಂತ 15:15ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
- Isaiah 65:1–2 ಯೆಶಾಯ 65:1–2ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು. ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Psalm 106:44 ಕೀರ್ತನೆಗಳು 106:44ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
- Hosea 14:1–3 ಹೋಶೇಯ 14:1–3ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ; ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು. ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
- Romans 10:20 ರೋಮಾಪುರದವರಿಗೆ 10:20ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
- Judges 3:9–10 ನ್ಯಾಯಸ್ಥಾಪಕರು 3:9–10ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು. ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- Judges 10:10–16 ನ್ಯಾಯಸ್ಥಾಪಕರು 10:10–16ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು. ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ? ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು. ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ. ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು. ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.