2 Chronicles · chapter 15 · verse 6
2 Chronicles 15:6 in Kannada
ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
Janaangavu janaangadindaloo pattanavu pattanadindaloo naashavaayitu. Yaakandare devaru sakala ikkattugalinda ava rannu tondarepadisidanu.
2 Chronicles 15:6 in English
- King James Version (KJV)
- And nation was destroyed of nation, and city of city: for God did vex them with all adversity.
- World English Bible (WEB)
- They were broken in pieces, nation against nation, and city against city; for God troubled them with all adversity.
- American Standard Version (ASV)
- And they were broken in pieces, nation against nation, and city against city; for God did vex them with all adversity.
- Bible in Basic English (BBE)
- And they were broken by divisions, nation against nation and town against town, because God sent all sorts of trouble on them.
- Darby Translation (DBY)
- And nation was broken against nation, and city against city; for God disturbed them with all manner of distress.
- Webster's Bible (WBS)
- And nation was destroyed by nation, and city by city: for God troubled them with all adversity.
- Young's Literal Translation (YLT)
- and they have been beaten down, nation by nation, and city by city, for God hath troubled them with every adversity;
Read in context
- 4ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.
- 5ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
- 6ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
- 7ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.
- 8ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
Cross references
- Luke 21:22–24 ಲೂಕನು 21:22–24ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- 2 Chronicles 13:17 2 ಪೂರ್ವಕಾಲವೃತ್ತಾಂತ 13:17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- Luke 21:9–10 ಲೂಕನು 21:9–10ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು. ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- 2 Chronicles 12:15 2 ಪೂರ್ವಕಾಲವೃತ್ತಾಂತ 12:15ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
- Matthew 24:7 ಮತ್ತಾಯನು 24:7ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- Mark 13:8 ಮಾರ್ಕನು 13:8ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
- Psalm 106:41 ಕೀರ್ತನೆಗಳು 106:41ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
- 2 Chronicles 36:17 2 ಪೂರ್ವಕಾಲವೃತ್ತಾಂತ 36:17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.