2 Chronicles · chapter 17 · verse 12
2 Chronicles 17:12 in Kannada
ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
Heege yehoshaaphaatanu barabaruttaa bahala doddavanaagi yehoodadalli kote ugraanada pattanagalannoo kattisidanu.
2 Chronicles 17:12 in English
- King James Version (KJV)
- And Jehoshaphat waxed great exceedingly; and he built in Judah castles, and cities of store.
- World English Bible (WEB)
- Jehoshaphat grew great exceedingly; and he built fortresses and store cities in Judah.
- American Standard Version (ASV)
- And Jehoshaphat waxed great exceedingly; and he built in Judah castles and cities of store.
- Bible in Basic English (BBE)
- Jehoshaphat became greater and greater, and made strong towers and store-towns in Judah.
- Darby Translation (DBY)
- And Jehoshaphat waxed exceeding great; and he built in Judah castles and store-cities.
- Webster's Bible (WBS)
- And Jehoshaphat became exceedingly great; and he built in Judah castles, and cities of store.
- Young's Literal Translation (YLT)
- And Jehoshaphat is going on and becoming very great, and he buildeth in Judah palaces and cities of store,
Read in context
- 10ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
- 11ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
- 12ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
- 13ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.
- 14ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
Cross references
- 2 Chronicles 27:4 2 ಪೂರ್ವಕಾಲವೃತ್ತಾಂತ 27:4ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
- 2 Chronicles 14:6–7 2 ಪೂರ್ವಕಾಲವೃತ್ತಾಂತ 14:6–7ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ. ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
- 2 Chronicles 32:27–29 2 ಪೂರ್ವಕಾಲವೃತ್ತಾಂತ 32:27–29ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು. ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು. ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
- 2 Chronicles 8:2–6 2 ಪೂರ್ವಕಾಲವೃತ್ತಾಂತ 8:2–6ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು. ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು. ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು. ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು. ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.
- 2 Chronicles 32:5 2 ಪೂರ್ವಕಾಲವೃತ್ತಾಂತ 32:5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
- 2 Chronicles 18:1 2 ಪೂರ್ವಕಾಲವೃತ್ತಾಂತ 18:1ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
- 2 Chronicles 26:6–9 2 ಪೂರ್ವಕಾಲವೃತ್ತಾಂತ 26:6–9ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು. ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು. ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು. ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.
- 1 Chronicles 29:25 1 ಪೂರ್ವಕಾಲವೃತ್ತಾಂತ 29:25ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
- 2 Chronicles 11:5–12 2 ಪೂರ್ವಕಾಲವೃತ್ತಾಂತ 11:5–12ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು. ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ ಬೇತ್ಚೂರ ಸೋಕೋ ಅದುಲ್ಲಾಮ್ ಗತ್ಊರು ಮಾರೇಷ್ ಜೀಫ್ ಅದೋರೈಮ್ ಲಾಕೀಷ್ ಅಜೇಕ ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ. ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು. ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.