2 Chronicles · chapter 17 · verse 4
2 Chronicles 17:4 in Kannada
ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.
Tanna tandeya devarannu huduki israayelina kriyegala prakaara nadeyade aatana aajnyegalalli nadedanu.
2 Chronicles 17:4 in English
- King James Version (KJV)
- But sought to the [ Lord] God of his father, and walked in his commandments, and not after the doings of Israel.
- World English Bible (WEB)
- but sought the God of his father, and walked in his commandments, and not in the ways of Israel.
- American Standard Version (ASV)
- but sought to the God of his father, and walked in his commandments, and not after the doings of Israel.
- Bible in Basic English (BBE)
- But turning to the God of his father and keeping his laws, and not doing as Israel did.
- Darby Translation (DBY)
- but he sought the God of his father, and walked in his commandments, and not after the doings of Israel.
- Webster's Bible (WBS)
- But sought to the [LORD] God of his father, and walked in his commandments, and not after the doings of Israel.
- Young's Literal Translation (YLT)
- for to the God of his father he hath sought, and in His commands he hath walked, and not according to the work of Israel.
Read in context
- 2ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
- 3ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
- 4ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.
- 5ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
- 6ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
Cross references
- 1 Kings 12:28 1 ಅರಸುಗಳು 12:28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
- 1 Thessalonians 2:12 1 ಥೆಸಲೊನೀಕದವರಿಗೆ 2:12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- 1 Thessalonians 4:1 1 ಥೆಸಲೊನೀಕದವರಿಗೆ 4:1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
- 2 Kings 17:19 2 ಅರಸುಗಳು 17:19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
- 2 Kings 8:18 2 ಅರಸುಗಳು 8:18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
- Hosea 4:15 ಹೋಶೇಯ 4:15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
- Jeremiah 3:7–8 ಯೆರೆಮೀಯ 3:7–8ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
- 1 Kings 16:31–33 1 ಅರಸುಗಳು 16:31–33ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು. ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು, ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- 1 Kings 12:33 1 ಅರಸುಗಳು 12:33ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- 1 Kings 12:30 1 ಅರಸುಗಳು 12:30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
- 1 Kings 13:33–34 1 ಅರಸುಗಳು 13:33–34ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು. ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.