2 Chronicles · chapter 18 · verse 10
2 Chronicles 18:10 in Kannada
ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
Aaga kenaanana maganaada chidkee yanu tanage kabbinada kombugalannu maadikondu --ivugalinda neenu araamyarannu nirmoola maaduva varegoo iridu haakuvi endu kartanu heluttaane andanu.
2 Chronicles 18:10 in English
- King James Version (KJV)
- And Zedekiah the son of Chenaanah had made him horns of iron, and said, Thus saith the LORD, With these thou shalt push Syria until they be consumed.
- World English Bible (WEB)
- Zedekiah the son of Chenaanah made himself horns of iron and said, “The LORD says, ‘With these you shall push the Syrians, until they are consumed.’”
- American Standard Version (ASV)
- And Zedekiah the son of Chenaanah made him horns of iron and said, Thus saith Jehovah, With these shalt thou push the Syrians, until they be consumed.
- Bible in Basic English (BBE)
- And Zedekiah, the son of Chenaanah, made himself iron horns and said, The Lord says, Pushing back the Aramaeans with these, you will put an end to them completely.
- Darby Translation (DBY)
- And Zedekiah the son of Chenaanah made for himself horns of iron, and he said, Thus saith Jehovah: With these shalt thou push the Syrians, until thou have exterminated them.
- Webster's Bible (WBS)
- And Zedekiah the son of Chenaanah had made him horns of iron, and said, Thus saith the LORD, With these thou shalt push Syria until they shall be consumed.
- Young's Literal Translation (YLT)
- And Zedekiah son of Chenaanah maketh for himself horns of iron, and saith, 'Thus said Jehovah,
Read in context
- 8ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
- 9ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.
- 10ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 11ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 12ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
Cross references
- Ezekiel 13:7 ಯೆಹೆಜ್ಕೇಲನು 13:7ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.
- Jeremiah 23:21 ಯೆರೆಮೀಯ 23:21ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
- Jeremiah 23:25 ಯೆರೆಮೀಯ 23:25ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
- Zechariah 1:18–21 ಜೆಕರ್ಯ 1:18–21ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು. ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು. ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು. ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Ezekiel 22:28 ಯೆಹೆಜ್ಕೇಲನು 22:28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- Jeremiah 28:10–14 ಯೆರೆಮೀಯ 28:10–14ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು. ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು. ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
- Jeremiah 23:31 ಯೆರೆಮೀಯ 23:31ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 2 Timothy 3:8 2 ತಿಮೊಥೆಯನಿಗೆ 3:8ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
- Jeremiah 28:2–3 ಯೆರೆಮೀಯ 28:2–3ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ. ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
- Jeremiah 29:21 ಯೆರೆಮೀಯ 29:21ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.
- Jeremiah 27:2 ಯೆರೆಮೀಯ 27:2ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
- Jeremiah 23:17 ಯೆರೆಮೀಯ 23:17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.