2 Chronicles · chapter 19 · verse 7
2 Chronicles 19:7 in Kannada
ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
Aadakaarana kartana bhayavu nimma mele irali. Neevu jaagrateyaagiddu nadisiri. Namma kartanaada devara baliyalli anyaayavaadaroo mukhadaakshinya vaadaroo lancha tegedukolluvadaadaroo illa andanu.
2 Chronicles 19:7 in English
- King James Version (KJV)
- Wherefore now let the fear of the LORD be upon you; take heed and do [it:] for [there is] no iniquity with the LORD our God, nor respect of persons, nor taking of gifts.
- World English Bible (WEB)
- Now therefore let the fear of the LORD be on you. Take heed and do it; for there is no iniquity with the LORD our God, nor respect of persons, nor taking of bribes.”
- American Standard Version (ASV)
- Now therefore let the fear of Jehovah be upon you; take heed and do it: for there is no iniquity with Jehovah our God, nor respect of persons, nor taking of bribes.
- Bible in Basic English (BBE)
- So now let the fear of the Lord be in you; do your work with care; for in the Lord our God there is no evil, or respect for high position, or taking of payment to do wrong.
- Darby Translation (DBY)
- And now, let the terror of Jehovah be upon you; be careful what ye do, for there is no iniquity with Jehovah, nor respect of persons, nor taking of presents.
- Webster's Bible (WBS)
- Wherefore now let the fear of the LORD be upon you; take heed and do [it] : for [there is] no iniquity with the LORD our God, nor respect of persons, nor taking of gifts.
- Young's Literal Translation (YLT)
- and now, let fear of Jehovah be upon you, observe and do, for there is not with Jehovah our God perverseness, and acceptance of faces, and taking of a bribe.'
Read in context
- 5ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
- 6ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
- 7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- 8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
- 9ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
Cross references
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Romans 2:11 ರೋಮಾಪುರದವರಿಗೆ 2:11ದೇವರಲ್ಲಿ ಪಕ್ಷಪಾತವಿಲ್ಲ.
- Deuteronomy 10:17–18 ಧರ್ಮೋಪದೇಶಕಾಂಡ 10:17–18ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ. ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
- Exodus 23:8 ವಿಮೋಚನಕಾಂಡ 23:8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- Colossians 3:25 ಕೊಲೊಸ್ಸೆಯವರಿಗೆ 3:25ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- Romans 9:14 ರೋಮಾಪುರದವರಿಗೆ 9:14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Acts 10:34 ಅಪೊಸ್ತಲರ ಕೃತ್ಯಗಳು 10:34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
- Deuteronomy 16:18–19 ಧರ್ಮೋಪದೇಶಕಾಂಡ 16:18–19ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Isaiah 1:23–26 ಯೆಶಾಯ 1:23–26ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ. ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು. ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು. ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
- Galatians 2:6 ಗಲಾತ್ಯದವರಿಗೆ 2:6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.