2 Chronicles · chapter 20 · verse 1
2 Chronicles 20:1 in Kannada
ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
Idara taruvaaya enaayitandare, movaabina makkaloo ammonina makkaloo ammonyara koda itararoo yeho shaaphaatana mele yuddhamaadalu bandaru.
2 Chronicles 20:1 in English
- King James Version (KJV)
- It came to pass after this also, [that] the children of Moab, and the children of Ammon, and with them [other] beside the Ammonites, came against Jehoshaphat to battle.
- World English Bible (WEB)
- After this, the children of Moab, the children of Ammon, and with them some of the Meunites, came against Jehoshaphat to battle.
- American Standard Version (ASV)
- And it came to pass after this, that the children of Moab, and the children of Ammon, and with them some of the Ammonites, came against Jehoshaphat to battle.
- Bible in Basic English (BBE)
- Now after this, the children of Moab and the children of Ammon, and with them some of the Meunim, made war against Jehoshaphat.
- Darby Translation (DBY)
- And it came to pass after this [that] the children of Moab, and the children of Ammon, and with them certain of the Maonites, came against Jehoshaphat to battle.
- Webster's Bible (WBS)
- It came to pass after this also, [that] the children of Moab, and the children of Ammon, and with them [others] besides the Ammonites, came against Jehoshaphat to battle.
- Young's Literal Translation (YLT)
- And it cometh to pass after this, the sons of Moab have come in, and the sons of Ammon, and with them of the peoples, against Jehoshaphat to battle.
Read in context
- 1ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
- 2ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
- 3ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
Cross references
- Isaiah 16:6 ಯೆಶಾಯ 16:6ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
- Psalm 83:5–8 ಕೀರ್ತನೆಗಳು 83:5–8ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- 2 Chronicles 32:1 2 ಪೂರ್ವಕಾಲವೃತ್ತಾಂತ 32:1ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
- 2 Chronicles 19:11 2 ಪೂರ್ವಕಾಲವೃತ್ತಾಂತ 19:11ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
- 1 Chronicles 4:41 1 ಪೂರ್ವಕಾಲವೃತ್ತಾಂತ 4:41ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.
- 2 Chronicles 19:5 2 ಪೂರ್ವಕಾಲವೃತ್ತಾಂತ 19:5ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
- Isaiah 7:1 ಯೆಶಾಯ 7:1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
- Jeremiah 10:24 ಯೆರೆಮೀಯ 10:24ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.