2 Chronicles · chapter 20 · verse 15
2 Chronicles 20:15 in Kannada
ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
Aaga avanuyehoodada samastare, yeroosalemina nivaasi gale, arasanaada yehoshaaphaatane, keliri. Kartanu nimage heege heluttaane--ee mahaagumpina nimitta neevu bhayapadabediri, hedara bediri. Yaakandare yuddhavu nimmadalla, deva rade.
2 Chronicles 20:15 in English
- King James Version (KJV)
- And he said, Hearken ye, all Judah, and ye inhabitants of Jerusalem, and thou king Jehoshaphat, Thus saith the LORD unto you, Be not afraid nor dismayed by reason of this great multitude; for the battle [is] not yours, but God’s.
- World English Bible (WEB)
- and he said, “Listen, all Judah, and you inhabitants of Jerusalem, and you, King Jehoshaphat. The LORD says to you, ‘Don’t be afraid, and don’t be dismayed because of this great multitude; for the battle is not yours, but God’s.
- American Standard Version (ASV)
- and he said, Hearken ye, all Judah, and ye inhabitants of Jerusalem, and thou king Jehoshaphat: Thus saith Jehovah unto you, Fear not ye, neither be dismayed by reason of this great multitude; for the battle is not yours, but God’s.
- Bible in Basic English (BBE)
- And he said, Give ear, O Judah, and you people of Jerusalem, and you, King Jehoshaphat: the Lord says to you, Have no fear and do not be troubled on account of this great army; for the fight is not yours but God's.
- Darby Translation (DBY)
- and he said, Be attentive, all Judah, and ye inhabitants of Jerusalem, and thou king Jehoshaphat! Thus saith Jehovah unto you: Fear not, nor be dismayed by reason of this great multitude; for the battle is not yours, but God's.
- Webster's Bible (WBS)
- And he said, Hearken ye, all Judah, and ye inhabitants of Jerusalem, and thou king Jehoshaphat, Thus saith the LORD to you, Be not afraid nor dismayed by reason of this great multitude; for the battle [is] not yours, but God's.
- Young's Literal Translation (YLT)
- and he saith, 'Attend, all Judah, and ye inhabitants of Jerusalem, and O king Jehoshaphat, Thus said Jehovah to you, Ye fear not, nor are afraid of the face of this great multitude, for not for you [is] the battle, but for God.
Read in context
- 13ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
- 14ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
- 15ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
- 16ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
- 17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
Cross references
- 2 Chronicles 32:7–8 2 ಪೂರ್ವಕಾಲವೃತ್ತಾಂತ 32:7–8ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ. ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- Deuteronomy 31:6 ಧರ್ಮೋಪದೇಶಕಾಂಡ 31:6ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
- Exodus 14:13–14 ವಿಮೋಚನಕಾಂಡ 14:13–14ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ. ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- 1 Samuel 17:47 1 ಸಮುವೇಲನು 17:47ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- Deuteronomy 31:8 ಧರ್ಮೋಪದೇಶಕಾಂಡ 31:8ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Deuteronomy 1:29–30 ಧರ್ಮೋಪದೇಶಕಾಂಡ 1:29–30ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ. ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
- Isaiah 41:10–16 ಯೆಶಾಯ 41:10–16ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ! ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Deuteronomy 20:4 ಧರ್ಮೋಪದೇಶಕಾಂಡ 20:4ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
- Deuteronomy 20:1 ಧರ್ಮೋಪದೇಶಕಾಂಡ 20:1ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
- Joshua 11:6 ಯೆಹೋಶುವ 11:6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
- Isaiah 43:1–2 ಯೆಶಾಯ 43:1–2ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Psalm 17:1–2 ಕೀರ್ತನೆಗಳು 17:1–2ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ. ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ.
Original words (Hebrew)
- said · H559אָמַר ʼâmar
- Hearken · H7181קָשַׁב qâshab
- Judah · H3063יְהוּדָה Yᵉhûwdâh
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- king · H4428מֶלֶךְ melek
- Jehoshaphat · H3092יְהוֹשָׁפָט Yᵉhôwshâphâṭ
- saith · H559אָמַר ʼâmar
- afraid · H3372יָרֵא yârêʼ
- dismayed · H2865חָתַת châthath
- reason · H6440פָּנִים pânîym
- great · H7227רַב rab
- multitude · H1995הָמוֹן hâmôwn
- battle · H4421מִלְחָמָה milchâmâh
- God’s · H430אֱלֹהִים ʼĕlôhîym