2 Chronicles · chapter 20 · verse 29
2 Chronicles 20:29 in Kannada
ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.
Kartanu israayelina shatrugala mele yuddhamaadidanendu avaru kelidaaga devara bhayavu aa deshagala sakala raajyagala mele bittu.
2 Chronicles 20:29 in English
- King James Version (KJV)
- And the fear of God was on all the kingdoms of [those] countries, when they had heard that the LORD fought against the enemies of Israel.
- World English Bible (WEB)
- The fear of God was on all the kingdoms of the countries when they heard that the LORD fought against the enemies of Israel.
- American Standard Version (ASV)
- And the fear of God was on all the kingdoms of the countries, when they heard that Jehovah fought against the enemies of Israel.
- Bible in Basic English (BBE)
- And the fear of God came on all the kingdoms of the lands, when they had news of how the Lord made war on those who came against Israel.
- Darby Translation (DBY)
- And the terror of God was on all the kingdoms of the lands, when they had heard that Jehovah fought against the enemies of Israel.
- Webster's Bible (WBS)
- And the fear of God was on all the kingdoms of [those] countries, when they had heard that the LORD fought against the enemies of Israel.
- Young's Literal Translation (YLT)
- And there is a fear of God on all kingdoms of the lands in their hearing that Jehovah hath fought with the enemies of Israel,
Read in context
- 27ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು
- 28ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.
- 29ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.
- 30ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
- 31ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.
Cross references
- 2 Chronicles 17:10 2 ಪೂರ್ವಕಾಲವೃತ್ತಾಂತ 17:10ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
- 2 Kings 7:6 2 ಅರಸುಗಳು 7:6ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
- Exodus 23:27 ವಿಮೋಚನಕಾಂಡ 23:27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
- Genesis 35:5 ಆದಿಕಾಂಡ 35:5ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
- 2 Chronicles 14:14 2 ಪೂರ್ವಕಾಲವೃತ್ತಾಂತ 14:14ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
- Joshua 9:9–11 ಯೆಹೋಶುವ 9:9–11ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು. ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು.
- Joshua 2:9–11 ಯೆಹೋಶುವ 2:9–11ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Joshua 5:1 ಯೆಹೋಶುವ 5:1ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
- Exodus 15:14–16 ವಿಮೋಚನಕಾಂಡ 15:14–16ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.