2 Chronicles · chapter 20 · verse 3
2 Chronicles 20:3 in Kannada
ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
Aaga yehoshaaphaatanu bhayapattu kartanannu hudukalu nirnayisi kondu samasta yehoodadalli upavaasamaada bekendu saarisidanu.
2 Chronicles 20:3 in English
- King James Version (KJV)
- And Jehoshaphat feared, and set himself to seek the LORD, and proclaimed a fast throughout all Judah.
- World English Bible (WEB)
- Jehoshaphat was alarmed, and set himself to seek the LORD. He proclaimed a fast throughout all Judah.
- American Standard Version (ASV)
- And Jehoshaphat feared, and set himself to seek unto Jehovah; and he proclaimed a fast throughout all Judah.
- Bible in Basic English (BBE)
- Then Jehoshaphat, in his fear, went to the Lord for directions, and gave orders all through Judah for the people to go without food.
- Darby Translation (DBY)
- And Jehoshaphat feared, and set himself to seek Jehovah, and proclaimed a fast throughout Judah.
- Webster's Bible (WBS)
- And Jehoshaphat feared, and set himself to seek the LORD, and proclaimed a fast throughout all Judah.
- Young's Literal Translation (YLT)
- And Jehoshaphat feareth, and setteth his face to seek to Jehovah, and proclaimeth a fast over all Judah;
Read in context
- 1ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
- 2ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
- 3ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
- 4ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
- 5ಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ
Cross references
- Daniel 9:3 ದಾನಿಯೇಲನು 9:3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
- Jeremiah 36:9 ಯೆರೆಮೀಯ 36:9ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- 1 Samuel 7:6 1 ಸಮುವೇಲನು 7:6ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
- Jonah 3:5–9 ಯೋನ 3:5–9ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- 2 Chronicles 19:3 2 ಪೂರ್ವಕಾಲವೃತ್ತಾಂತ 19:3ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
- Joel 2:12–18 ಯೋವೇಲ 2:12–18ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು? ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ. ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ. ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು? ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
- Joel 1:14 ಯೋವೇಲ 1:14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- Ezra 8:21–23 ಎಜ್ರನು 8:21–23ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು. ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು. ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.
- Isaiah 37:3–6 ಯೆಶಾಯ 37:3–6ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು. ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು. ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು-- ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
- Psalm 56:3–4 ಕೀರ್ತನೆಗಳು 56:3–4ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು. ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.