2 Chronicles · chapter 21 · verse 11
2 Chronicles 21:11 in Kannada
ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
Avanu yehoodada parvatagalalli unnata sthalagalannu maadi yeroosalemina nivaasigalannu vyabhichaara maadalu prerepisi haageye maadalu yehoo dadavarannu balavanta maadidanu.
2 Chronicles 21:11 in English
- King James Version (KJV)
- Moreover he made high places in the mountains of Judah, and caused the inhabitants of Jerusalem to commit fornication, and compelled Judah [thereto].
- World English Bible (WEB)
- Moreover he made high places in the mountains of Judah, and made the inhabitants of Jerusalem play the prostitute, and led Judah astray.
- American Standard Version (ASV)
- Moreover he made high places in the mountains of Judah, and made the inhabitants of Jerusalem to play the harlot, and led Judah astray.
- Bible in Basic English (BBE)
- And more than this, he made high places in the mountains of Judah, teaching the people of Jerusalem to go after false gods, and guiding Judah away from the true way.
- Darby Translation (DBY)
- Moreover he made high places on the mountains of Judah, and caused the inhabitants of Jerusalem to commit fornication, and compelled Judah [thereto].
- Webster's Bible (WBS)
- Moreover, he made high places in the mountains of Judah, and caused the inhabitants of Jerusalem to commit fornication, and compelled Judah to [do the same] .
- Young's Literal Translation (YLT)
- also, he hath made high places in the mountains of Judah, and causeth the inhabitants of Jerusalem to commit whoredom, and compelleth Judah.
Read in context
- 9ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.
- 10ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
- 11ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
- 12ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ
- 13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
Cross references
- Leviticus 20:5 ಯಾಜಕಕಾಂಡ 20:5ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Leviticus 17:7 ಯಾಜಕಕಾಂಡ 17:7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
- 1 Kings 11:7 1 ಅರಸುಗಳು 11:7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
- Ezekiel 16:15–63 ಯೆಹೆಜ್ಕೇಲನು 16:15–63ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ. ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ. ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ. ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ. ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ; ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ. ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;) ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ. ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ. ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ. ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ. ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ. ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ; ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ! ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ. ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ. ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು. ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು; ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ. ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು. ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು. ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ. ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು. ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ. ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ. ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ. ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ. ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- 2 Chronicles 21:13 2 ಪೂರ್ವಕಾಲವೃತ್ತಾಂತ 21:13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
- Habakkuk 2:15 ಹಬಕ್ಕೂಕ 2:15ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
- 2 Kings 21:11 2 ಅರಸುಗಳು 21:11ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
- Deuteronomy 12:2–4 ಧರ್ಮೋಪದೇಶಕಾಂಡ 12:2–4ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು. ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು. ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Psalm 78:58 ಕೀರ್ತನೆಗಳು 78:58ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
- Revelation 17:1–6 ಪ್ರಕಟನೆ 17:1–6ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- 1 Kings 14:16 1 ಅರಸುಗಳು 14:16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.