2 Chronicles · chapter 23 · verse 18
2 Chronicles 23:18 in Kannada
ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.
Idallade yeho yaadanu kartana aalayada parichaarakarannu nemi sidanu. Mosheya nyaayapramaanadalli baredi ruva haage santoshadindaloo sangeetadindaloo daaveedaninda nemisalpatta haage daaveedanu kartana dahanabaligalannu arpisuvadakke kartana aalaya dalli vibhaagisida leviyaraada yaajakarinda avarannu nemisidanu.
2 Chronicles 23:18 in English
- King James Version (KJV)
- Also Jehoiada appointed the offices of the house of the LORD by the hand of the priests the Levites, whom David had distributed in the house of the LORD, to offer the burnt offerings of the LORD, as [it is] written in the law of Moses, with rejoicing and with singing, [as it was ordained] by David.
- World English Bible (WEB)
- Jehoiada appointed the officers of the LORD’s house under the hand of the Levitical priests, whom David had distributed in the LORD’s house, to offer the burnt offerings of the LORD, as it is written in the law of Moses, with rejoicing and with singing, as David had ordered.
- American Standard Version (ASV)
- And Jehoiada appointed the officers of the house of Jehovah under the hand of the priests the Levites, whom David had distributed in the house of Jehovah, to offer the burnt-offerings of Jehovah, as it is written in the law of Moses, with rejoicing and with singing, according to the order of David.
- Bible in Basic English (BBE)
- And Jehoiada put the work and the care of the house of the Lord into the hands of the priests and the Levites, who had been grouped in divisions by David to make burned offerings to the Lord, as it is recorded in the law of Moses, with joy and song as David had said.
- Darby Translation (DBY)
- And Jehoiada appointed the offices of the house of Jehovah under the hand of the priests, the Levites, whom David had set by classes over the house of Jehovah to offer up Jehovah's burnt-offerings, as it is written in the law of Moses, — with rejoicing and with singing according to the directions of David.
- Webster's Bible (WBS)
- Also Jehoiada appointed the offices of the house of the LORD by the hand of the priests the Levites, whom David had distributed in the house of the LORD, to offer the burnt-offerings of the LORD, as [it is] written in the law of Moses, with rejoicing and with singing, [as it was ordained] by David.
- Young's Literal Translation (YLT)
- And Jehoiada putteth the offices of the house of Jehovah into the hand of the priests the Levites whom David had apportioned over the house of Jehovah, to cause to ascend the burnt-offerings of Jehovah, as written in the law of Moses, with joy, and with singing, by the hands of David;
Read in context
- 16ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
- 17ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.
- 18ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.
- 19ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.
- 20ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
Cross references
- Numbers 28:1–31 ಅರಣ್ಯಕಾಂಡ 28:1–31ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು. ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- 2 Chronicles 5:5 2 ಪೂರ್ವಕಾಲವೃತ್ತಾಂತ 5:5ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು.
- 1 Chronicles 23:1–24 1 ಪೂರ್ವಕಾಲವೃತ್ತಾಂತ 23:1–24ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು. ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು. ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು. ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು. ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು. ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು. ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು -- ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು. ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು. ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು. ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು. ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು. ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು. ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು. ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು. ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು. ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು. ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು. ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು; ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು. ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ. ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
- 2 Chronicles 29:25 2 ಪೂರ್ವಕಾಲವೃತ್ತಾಂತ 29:25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
- 1 Chronicles 25:1–31 1 ಪೂರ್ವಕಾಲವೃತ್ತಾಂತ 25:1–31ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ. ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
- 1 Chronicles 23:28–31 1 ಪೂರ್ವಕಾಲವೃತ್ತಾಂತ 23:28–31ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು. ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
Original words (Hebrew)
- Jehoiada · H3077יְהוֹיָדָע Yᵉhôwyâdâʻ
- appointed · H7760שׂוּם sûwm
- offices · H6486פְּקֻדָּה pᵉquddâh
- house · H1004בַּיִת bayith
- hand · H3027יָד yâd
- priests · H3548כֹּהֵן kôhên
- Levites · H3881לֵוִיִּי Lêvîyîy
- David · H1732דָּוִד Dâvid
- distributed · H2505חָלַק châlaq
- house · H1004בַּיִת bayith
- offer · H5927עָלָה ʻâlâh
- offerings · H5930עֹלָה ʻôlâh
- written · H3789כָּתַב kâthab
- law · H8451תּוֹרָה tôwrâh
- Moses · H4872מֹשֶׁה Môsheh
- rejoicing · H8057שִׂמְחָה simchâh
- singing · H7892שִׁיר shîyr
- by · H3027יָד yâd
- David · H1732דָּוִד Dâvid