2 Chronicles · chapter 24 · verse 2
2 Chronicles 24:2 in Kannada
ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
Yehovaashanu yaajakanaada yehoyaa dana samasta divasagalalli kartana sammukhadalli sariyaadaddannu maadidanu.
2 Chronicles 24:2 in English
- King James Version (KJV)
- And Joash did [that which was] right in the sight of the LORD all the days of Jehoiada the priest.
- World English Bible (WEB)
- Joash did that which was right in the LORD’s eyes all the days of Jehoiada the priest.
- American Standard Version (ASV)
- And Joash did that which was right in the eyes of Jehovah all the days of Jehoiada the priest.
- Bible in Basic English (BBE)
- And Joash did what was right in the eyes of the Lord as long as Jehoiada the priest was living.
- Darby Translation (DBY)
- And Joash did what was right in the sight of Jehovah all the days of Jehoiada the priest.
- Webster's Bible (WBS)
- And Joash did [that which was] right in the sight of the LORD all the days of Jehoiada the priest.
- Young's Literal Translation (YLT)
- And Joash doth that which is right in the eyes of Jehovah all the days of Jehoiada the priest.
Read in context
- 1ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
- 2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
- 3ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.
- 4ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.
Cross references
- 2 Chronicles 26:4–5 2 ಪೂರ್ವಕಾಲವೃತ್ತಾಂತ 26:4–5ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು. ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
- 2 Chronicles 25:2 2 ಪೂರ್ವಕಾಲವೃತ್ತಾಂತ 25:2ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.
- 2 Chronicles 24:17–22 2 ಪೂರ್ವಕಾಲವೃತ್ತಾಂತ 24:17–22ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು. ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು. ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು. ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು. ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು. ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
- Psalm 78:36–37 ಕೀರ್ತನೆಗಳು 78:36–37ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Psalm 106:12–13 ಕೀರ್ತನೆಗಳು 106:12–13ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು. ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- 2 Kings 12:2 2 ಅರಸುಗಳು 12:2ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Mark 4:16–17 ಮಾರ್ಕನು 4:16–17ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.