2 Chronicles · chapter 28 · verse 2
2 Chronicles 28:2 in Kannada
ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು.
Avanu israayelina arasugala maargagalalli nadedu baalanigoskara eraka hoyida vigrahagalannu maadisidanu.
2 Chronicles 28:2 in English
- King James Version (KJV)
- For he walked in the ways of the kings of Israel, and made also molten images for Baalim.
- World English Bible (WEB)
- but he walked in the ways of the kings of Israel, and also made molten images for the Baals.
- American Standard Version (ASV)
- but he walked in the ways of the kings of Israel, and made also molten images for the Baalim.
- Bible in Basic English (BBE)
- But he went in the ways of the kings of Israel and made images of metal for the Baals.
- Darby Translation (DBY)
- but walked in the ways of the kings of Israel, and even made molten images for the Baals;
- Webster's Bible (WBS)
- For he walked in the ways of the kings of Israel, and made also molten images for Baalim.
- Young's Literal Translation (YLT)
- and walketh in the ways of the kings of Israel, and also, molten images hath made for Baalim,
Read in context
- 1ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ.
- 2ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು.
- 3ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
- 4ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
Cross references
- Exodus 34:17 ವಿಮೋಚನಕಾಂಡ 34:17ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
- Judges 2:11 ನ್ಯಾಯಸ್ಥಾಪಕರು 2:11ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
- Judges 2:13 ನ್ಯಾಯಸ್ಥಾಪಕರು 2:13ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
- 1 Kings 16:31–33 1 ಅರಸುಗಳು 16:31–33ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು. ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು, ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- 2 Chronicles 21:6 2 ಪೂರ್ವಕಾಲವೃತ್ತಾಂತ 21:6ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
- Hosea 2:17 ಹೋಶೇಯ 2:17ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
- 2 Kings 10:26–28 2 ಅರಸುಗಳು 10:26–28ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು. ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು. ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.
- Leviticus 19:4 ಯಾಜಕಕಾಂಡ 19:4ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Hosea 2:13 ಹೋಶೇಯ 2:13ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
- 2 Chronicles 22:3–4 2 ಪೂರ್ವಕಾಲವೃತ್ತಾಂತ 22:3–4ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು. ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.