2 Chronicles · chapter 29 · verse 11
2 Chronicles 29:11 in Kannada
ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
Nanna makkale, udaaseenaraagirabediri; yaakandare tanna sammukhadalli nilluvadakkoo tannannu sevisuvadakkoo sevakaraagiruvadakkoo dhoopasuduvadakkoo kartanu nimmannu aadukondiddaane andanu.
2 Chronicles 29:11 in English
- King James Version (KJV)
- My sons, be not now negligent: for the LORD hath chosen you to stand before him, to serve him, and that ye should minister unto him, and burn incense.
- World English Bible (WEB)
- My sons, don’t be negligent now; for the LORD has chosen you to stand before him, to minister to him, and that you should be his ministers and burn incense.”
- American Standard Version (ASV)
- My sons, be not now negligent; for Jehovah hath chosen you to stand before him, to minister unto him, and that ye should be his ministers, and burn incense.
- Bible in Basic English (BBE)
- My sons, take care now: for you have been marked out by the Lord to come before him and to be his servants, burning offerings to him.
- Darby Translation (DBY)
- My sons, be not now negligent; for Jehovah has chosen you to stand before him, to do service unto him, and to be his ministers and incense-burners.
- Webster's Bible (WBS)
- My sons, be not now negligent: for the LORD hath chosen you to stand before him, to serve him, and that ye should minister to him, and burn incense.
- Young's Literal Translation (YLT)
- My sons, be not now at rest, for on you hath Jehovah fixed to stand before Him, to serve Him, and to be to Him ministering and making perfume.'
Read in context
- 9ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
- 10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
- 11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
- 12ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ
- 13ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ
Cross references
- Numbers 8:6–14 ಅರಣ್ಯಕಾಂಡ 8:6–14ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು. ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು. ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ. ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು. ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು. ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು. ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು. ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು. ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- Numbers 18:2–7 ಅರಣ್ಯಕಾಂಡ 18:2–7ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು; ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು. ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು. ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ. ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Numbers 3:6–9 ಅರಣ್ಯಕಾಂಡ 3:6–9ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ. ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ. ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು. ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Numbers 16:35–40 ಅರಣ್ಯಕಾಂಡ 16:35–40ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು. ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು. ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು. ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.