2 Chronicles · chapter 29 · verse 26
2 Chronicles 29:26 in Kannada
ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ
Leviyaru daaveedana vaadyagalannoo yaajakaru tutoorigalannoo hididu nintiruvaaga
2 Chronicles 29:26 in English
- King James Version (KJV)
- And the Levites stood with the instruments of David, and the priests with the trumpets.
- World English Bible (WEB)
- The Levites stood with David’s instruments, and the priests with the trumpets.
- American Standard Version (ASV)
- And the Levites stood with the instruments of David, and the priests with the trumpets.
- Bible in Basic English (BBE)
- So the Levites took their places with David's instruments, and the priests with their horns.
- Darby Translation (DBY)
- And the Levites stood with the instruments of David, and the priests with the trumpets.
- Webster's Bible (WBS)
- And the Levites stood with the instruments of David, and the priests with the trumpets.
- Young's Literal Translation (YLT)
- and the Levites stand with the instruments of David, and the priests with the trumpets.
Read in context
- 24ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
- 25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
- 26ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ
- 27ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.
- 28ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
Cross references
- 1 Chronicles 23:5 1 ಪೂರ್ವಕಾಲವೃತ್ತಾಂತ 23:5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
- 1 Chronicles 15:24 1 ಪೂರ್ವಕಾಲವೃತ್ತಾಂತ 15:24ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
- Amos 6:5 ಆಮೋಸ 6:5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
- Psalm 81:3 ಕೀರ್ತನೆಗಳು 81:3ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
- Isaiah 38:20 ಯೆಶಾಯ 38:20ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
- 1 Chronicles 16:6 1 ಪೂರ್ವಕಾಲವೃತ್ತಾಂತ 16:6ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
- 2 Chronicles 5:12–13 2 ಪೂರ್ವಕಾಲವೃತ್ತಾಂತ 5:12–13ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು. ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- Joshua 6:4–9 ಯೆಹೋಶುವ 6:4–9ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು. ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು. ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು. ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು. ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು. ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
- Numbers 10:10 ಅರಣ್ಯಕಾಂಡ 10:10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Psalm 87:7 ಕೀರ್ತನೆಗಳು 87:7ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
- Numbers 10:8 ಅರಣ್ಯಕಾಂಡ 10:8ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
- Psalm 150:3–5 ಕೀರ್ತನೆಗಳು 150:3–5ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.