2 Chronicles · chapter 29 · verse 5
2 Chronicles 29:5 in Kannada
ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
Leviyare, nanna maatannu keliri; neevu nimmannu parishuddha maadikondu nimma pitrugala kartanaada devara maneyannu parishuddhamaadi adara mailigeyannu parishuddha sthaanadinda tegeduhaakiri.
2 Chronicles 29:5 in English
- King James Version (KJV)
- And said unto them, Hear me, ye Levites, sanctify now yourselves, and sanctify the house of the LORD God of your fathers, and carry forth the filthiness out of the holy [place].
- World English Bible (WEB)
- and said to them, “Listen to me, you Levites! Now sanctify yourselves, and sanctify the house of the LORD, the God of your fathers, and carry the filthiness out of the holy place.
- American Standard Version (ASV)
- and said unto them, Hear me, ye Levites; now sanctify yourselves, and sanctify the house of Jehovah, the God of your fathers, and carry forth the filthiness out of the holy place.
- Bible in Basic English (BBE)
- And said to them, Give ear to me, O Levites: now make yourselves holy, and make holy the house of the Lord, the God of your fathers, and take away everything unclean from the holy place.
- Darby Translation (DBY)
- and he said to them, Hear me, ye Levites: hallow yourselves now, and hallow the house of Jehovah the God of your fathers, and carry forth the filthiness out of the sanctuary.
- Webster's Bible (WBS)
- And said to them, Hear me, ye Levites, sanctify now yourselves, and sanctify the house of the LORD God of your fathers, and carry forth the filthiness out of the holy [place] .
- Young's Literal Translation (YLT)
- And he saith to them, 'Hear me, O Levites, now, sanctify yourselves, and sanctify the house of Jehovah, God of your fathers, and bring out the impurity from the sanctuary,
Read in context
- 3ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
- 4ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
- 5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- 6ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
- 7ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
Cross references
- 2 Chronicles 35:6 2 ಪೂರ್ವಕಾಲವೃತ್ತಾಂತ 35:6ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
- 1 Corinthians 3:16–17 1 ಕೊರಿಂಥದವರಿಗೆ 3:16–17ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- Ezekiel 8:9–18 ಯೆಹೆಜ್ಕೇಲನು 8:9–18ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು. ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ. ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- 1 Chronicles 15:12 1 ಪೂರ್ವಕಾಲವೃತ್ತಾಂತ 15:12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- 2 Chronicles 34:3–8 2 ಪೂರ್ವಕಾಲವೃತ್ತಾಂತ 34:3–8ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು. ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು. ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು. ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು. ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
- 2 Chronicles 29:34 2 ಪೂರ್ವಕಾಲವೃತ್ತಾಂತ 29:34ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
- 2 Chronicles 29:15–16 2 ಪೂರ್ವಕಾಲವೃತ್ತಾಂತ 29:15–16ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು. ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Exodus 19:15 ವಿಮೋಚನಕಾಂಡ 19:15ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
- Ezekiel 8:3 ಯೆಹೆಜ್ಕೇಲನು 8:3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- Ephesians 5:26–27 ಎಫೆಸದವರಿಗೆ 5:26–27ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.