2 Chronicles · chapter 30 · verse 7
2 Chronicles 30:7 in Kannada
ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.
Tamma pitrugala devaraada kartanige aparaadha maadidantha, neevu noduva haage naashanakke oppisalpattantha, nimma pitrugala haageyoo nimma sahodarara haageyoo irabediri.
2 Chronicles 30:7 in English
- King James Version (KJV)
- And be not ye like your fathers, and like your brethren, which trespassed against the LORD God of their fathers, [who] therefore gave them up to desolation, as ye see.
- World English Bible (WEB)
- Don’t be like your fathers and like your brothers, who trespassed against the LORD, the God of their fathers, so that he gave them up to desolation, as you see.
- American Standard Version (ASV)
- And be not ye like your fathers, and like your brethren, who trespassed against Jehovah, the God of their fathers, so that he gave them up to desolation, as ye see.
- Bible in Basic English (BBE)
- Do not be like your fathers and your brothers, who were sinners against the Lord, the God of their fathers, so that he made them a cause of fear, as you see.
- Darby Translation (DBY)
- And be not like your fathers and like your brethren, who transgressed against Jehovah the God of their fathers, so that he gave them up to desolation, as ye see.
- Webster's Bible (WBS)
- And be not ye like your fathers, and like your brethren, who trespassed against the LORD God of their fathers, [who] therefore gave them up to desolation, as ye see.
- Young's Literal Translation (YLT)
- and do not be like your fathers, and like your brethren, who trespassed against Jehovah, God of their fathers, and He giveth them to desolation, as ye do see.
Read in context
- 5ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.
- 6ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
- 7ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.
- 8ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
- 9ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
Cross references
- 2 Chronicles 29:8 2 ಪೂರ್ವಕಾಲವೃತ್ತಾಂತ 29:8ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
- Zechariah 1:3–4 ಜೆಕರ್ಯ 1:3–4ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Ezekiel 20:13–18 ಯೆಹೆಜ್ಕೇಲನು 20:13–18ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು. ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು. ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು. ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು. ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ. ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;