2 Chronicles · chapter 31 · verse 3
2 Chronicles 31:3 in Kannada
ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
Avanu kartana nyaayapramaanadalli bareda prakaara udayakaalada saayankaalada dahana baligaligoskaravoo sabbattugalalliyoo amavaasye galalliyoo nemisida habbagalalliyoo bekaada dahanabaligaligoskaravoo arasana sthitiyinda avana bhaagavannu nemisidanu.
2 Chronicles 31:3 in English
- King James Version (KJV)
- [He appointed] also the king’s portion of his substance for the burnt offerings, [to wit], for the morning and evening burnt offerings, and the burnt offerings for the sabbaths, and for the new moons, and for the set feasts, as [it is] written in the law of the LORD.
- World English Bible (WEB)
- He also appointed the king’s portion of his possessions for the burnt offerings: for the morning and evening burnt offerings, and the burnt offerings for the Sabbaths, for the new moons, and for the set feasts, as it is written in the LORD’s law.
- American Standard Version (ASV)
- [He appointed] also the king’s portion of his substance for the burnt-offerings, [to wit], for the morning and evening burnt-offerings, and the burnt-offerings for the sabbaths, and for the new moons, and for the set feasts, as it is written in the law of Jehovah.
- Bible in Basic English (BBE)
- And he gave the king's part of his private property for the burned offerings, that is, for the morning and evening offerings, and the offerings for the Sabbath and the new moons and the regular feasts, as it is recorded in the law of the Lord.
- Darby Translation (DBY)
- And [he ordered] that the king's portion [should be taken] from his substance for the burnt-offerings: for the morning and evening burnt-offerings, for the burnt-offerings of the sabbaths, and of the new moons, and of the set feasts, as it is written in the law of Jehovah.
- Webster's Bible (WBS)
- [He appointed] also the king's portion of his substance for the burnt-offerings, [to wit] , for the morning and evening burnt-offerings, and the burnt-offerings for the sabbaths, and for the new-moons, and for the set feasts, as [it is] written in the law of the LORD.
- Young's Literal Translation (YLT)
- And a portion of the king, from his substance, [is] for burnt-offerings, for burnt-offerings of the morning, and of the evening, and the burnt-offerings of sabbaths, and of new moons, and of appointed seasons, as it is written in the law of Jehovah.
Read in context
- 1ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
- 2ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
- 3ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
- 4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
- 5ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
Cross references
- Ezekiel 45:17 ಯೆಹೆಜ್ಕೇಲನು 45:17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
- 2 Chronicles 35:7 2 ಪೂರ್ವಕಾಲವೃತ್ತಾಂತ 35:7ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
- Colossians 2:16–17 ಕೊಲೊಸ್ಸೆಯವರಿಗೆ 2:16–17ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ. ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- Psalm 81:1–4 ಕೀರ್ತನೆಗಳು 81:1–4ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ. ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ. ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ. ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
- Deuteronomy 16:1–17 ಧರ್ಮೋಪದೇಶಕಾಂಡ 16:1–17ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು; ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು; ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು. ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು. ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು. ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು. ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು. ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು. ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು. ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
- 2 Chronicles 30:24 2 ಪೂರ್ವಕಾಲವೃತ್ತಾಂತ 30:24ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
- Leviticus 23:2–44 ಯಾಜಕಕಾಂಡ 23:2–44ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ, ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು. ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು. ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು. ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು. ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು. ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು. ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು. ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು. ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು. ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು. ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು. ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು. ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Ezekiel 46:12–18 ಯೆಹೆಜ್ಕೇಲನು 46:12–18ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು. ನೀನು ಪ್ರತಿದಿನವೂ ಕರ್ತನಿಗೆ ಒಂದು ವರುಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ದಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು. ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ. ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ. ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು. ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
- Exodus 29:38–42 ವಿಮೋಚನಕಾಂಡ 29:38–42ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- 1 Chronicles 26:26 1 ಪೂರ್ವಕಾಲವೃತ್ತಾಂತ 26:26ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
- Numbers 28:1–40 ಅರಣ್ಯಕಾಂಡ 28:1–40ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು. ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- Ezekiel 46:4–7 ಯೆಹೆಜ್ಕೇಲನು 46:4–7ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು. ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು; ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು. ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.
Original words (Hebrew)
- king’s · H4428מֶלֶךְ melek
- portion · H4521מְנָת mᵉnâth
- substance · H7399רְכוּשׁ rᵉkûwsh
- offerings · H5930עֹלָה ʻôlâh
- morning · H1242בֹּקֶר bôqer
- evening · H6153עֶרֶב ʻereb
- offerings · H5930עֹלָה ʻôlâh
- offerings · H5930עֹלָה ʻôlâh
- sabbaths · H7676שַׁבָּת shabbâth
- moons · H2320חֹדֶשׁ chôdesh
- feasts · H4150מוֹעֵד môwʻêd
- written · H3789כָּתַב kâthab
- law · H8451תּוֹרָה tôwrâh