2 Chronicles · chapter 32 · verse 1
2 Chronicles 32:1 in Kannada
ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
Ee kaaryagaloo ivugala sthaapaneyoo aada taruvaaya ashshoorina arasanaada sanhereebanu horatu bandu yehoodadalli praveshisi koteyulla pattanagala baliyalli dandilidu avugalannu tanagaagi jayisabekendu andukondanu.
2 Chronicles 32:1 in English
- King James Version (KJV)
- After these things, and the establishment thereof, Sennacherib king of Assyria came, and entered into Judah, and encamped against the fenced cities, and thought to win them for himself.
- World English Bible (WEB)
- After these things and this faithfulness, Sennacherib king of Assyria came, entered into Judah, encamped against the fortified cities, and intended to win them for himself.
- American Standard Version (ASV)
- After these things, and this faithfulness, Sennacherib king of Assyria came, and entered into Judah, and encamped against the fortified cities, and thought to win them for himself.
- Bible in Basic English (BBE)
- Now after these things and this true-hearted work, Sennacherib, king of Assyria, came into Judah, and put his army in position before the walled towns of Judah, designing to make his way into them by force.
- Darby Translation (DBY)
- After these things and this faithfulness, Sennacherib king of Assyria came and entered into Judah, and encamped against the fortified cities, and thought to break into them.
- Webster's Bible (WBS)
- After [these] things, and their establishment, Sennacherib king of Assyria came, and entered into Judah, and encamped against the fortified cities, and thought to win them for himself.
- Young's Literal Translation (YLT)
- After these things and this truth, come hath Sennacherib king of Asshur, yea, he cometh in to Judah, and encampeth against the cities of the bulwarks, and saith to rend them unto himself.
Read in context
- 1ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
- 2ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ
- 3ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
Cross references
- 2 Kings 18:13–37 2 ಅರಸುಗಳು 18:13–37ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು. ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು. ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು. ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು. ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು? ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು. ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ. ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ? ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ. ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ? ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು. ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು. ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು. ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ. ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು. ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ. ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ. ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ. ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ? ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು. ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು. ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
- 2 Kings 18:11 2 ಅರಸುಗಳು 18:11ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Isaiah 7:17–18 ಯೆಶಾಯ 7:17–18ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು. ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
- Hosea 11:5 ಹೋಶೇಯ 11:5ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.
- Micah 2:13 ಮೀಕ 2:13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- Isaiah 10:5–11 ಯೆಶಾಯ 10:5–11ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ. ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
- 2 Kings 15:19 2 ಅರಸುಗಳು 15:19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
- Isaiah 36:1–38 ಯೆಶಾಯ 36:1–38ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು. ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು. ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು? ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ? ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ. ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ? ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು. ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ. ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು. ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು. ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು. ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ. ಇವನು ನಿಮಗೆ--ಹಿಜ್ಕೀಯನು ನಿಮಗೆ ಮೋಸಮಾಡದಿರಲಿ, ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ. ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ; ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ. ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು. ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ? ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ? ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು. ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು. ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
- 2 Chronicles 20:1–2 2 ಪೂರ್ವಕಾಲವೃತ್ತಾಂತ 20:1–2ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು. ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Isaiah 8:6–8 ಯೆಶಾಯ 8:6–8ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
Original words (Hebrew)
- After · H310אַחַר ʼachar
- things · H1697דָּבָר dâbâr
- establishment · H571אֶמֶת ʼemeth
- Sennacherib · H5576סַנְחֵרִיב Çanchêrîyb
- king · H4428מֶלֶךְ melek
- Assyria · H804אַשּׁוּר ʼAshshûwr
- came · H935בּוֹא bôwʼ
- entered · H935בּוֹא bôwʼ
- Judah · H3063יְהוּדָה Yᵉhûwdâh
- encamped · H2583חָנָה chânâh
- fenced · H1219בָּצַר bâtsar
- cities · H5892עִיר ʻîyr
- thought · H559אָמַר ʼâmar
- win · H1234בָּקַע bâqaʻ