2 Chronicles · chapter 32 · verse 19
2 Chronicles 32:19 in Kannada
ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
Manushyara kai kelasavaada bhoomiya janagala devarugalige virodhavaagi maatanaadida haage yeroosalemina devarige virodhavaagi maatanaadidaru.
2 Chronicles 32:19 in English
- King James Version (KJV)
- And they spake against the God of Jerusalem, as against the gods of the people of the earth, [which were] the work of the hands of man.
- World English Bible (WEB)
- They spoke of the God of Jerusalem as of the gods of the peoples of the earth, which are the work of men’s hands.
- American Standard Version (ASV)
- And they spake of the God of Jerusalem, as of the gods of the peoples of the earth, which are the work of men’s hands.
- Bible in Basic English (BBE)
- Talking of the God of Jerusalem as if he was like the gods of the peoples of the earth, the work of men's hands.
- Darby Translation (DBY)
- And they spoke of the God of Jerusalem as of the gods of the peoples of the earth, the work of man's hand.
- Webster's Bible (WBS)
- And they spoke against the God of Jerusalem, as against the gods of the people of the earth, the work of the hands of man.
- Young's Literal Translation (YLT)
- and they speak against the God of Jerusalem as against the gods of the peoples of the land — work of the hands of man.
Read in context
- 17ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
- 18ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
- 19ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
- 20ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
- 21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
Cross references
- 2 Kings 19:18 2 ಅರಸುಗಳು 19:18ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
- Isaiah 2:8 ಯೆಶಾಯ 2:8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
- Jeremiah 10:3 ಯೆರೆಮೀಯ 10:3ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
- Job 15:25–26 ಯೋಬನು 15:25–26ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ. ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- Psalm 135:15–18 ಕೀರ್ತನೆಗಳು 135:15–18ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ. ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ. ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ. ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Jeremiah 10:9 ಯೆರೆಮೀಯ 10:9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
- Deuteronomy 4:28 ಧರ್ಮೋಪದೇಶಕಾಂಡ 4:28ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
- Psalm 10:13–14 ಕೀರ್ತನೆಗಳು 10:13–14ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
- Isaiah 44:16–20 ಯೆಶಾಯ 44:16–20ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Isaiah 14:32 ಯೆಶಾಯ 14:32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.