2 Chronicles · chapter 32 · verse 7
2 Chronicles 32:7 in Kannada
ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
Balagolliri; dhairya vaagirri; ashshoorina arasana nimittavoo avana sangada koodiruva mahaagumpina nimittavoo bhaya padabediri; hedarabediri. Yaakandare avana sangada iruvavariginta namma sangada anekaru iddaare.
2 Chronicles 32:7 in English
- King James Version (KJV)
- Be strong and courageous, be not afraid nor dismayed for the king of Assyria, nor for all the multitude that [is] with him: for [there be] more with us than with him:
- World English Bible (WEB)
- “Be strong and courageous. Don’t be afraid or dismayed because of the king of Assyria, nor for all the multitude who is with him; for there is a greater one with us than with him.
- American Standard Version (ASV)
- Be strong and of good courage, be not afraid nor dismayed for the king of Assyria, nor for all the multitude that is with him; for there is a greater with us than with him:
- Bible in Basic English (BBE)
- Be strong and take heart; have no fear, and do not be troubled on account of the king of Assyria and all the great army with him: for there is a greater with us.
- Darby Translation (DBY)
- Be strong and courageous, be not afraid nor dismayed for the king of Assyria, nor for all the multitude that is with him; for there are more with us than with him:
- Webster's Bible (WBS)
- Be strong and courageous, be not afraid nor dismayed for the king of Assyria, nor for all the multitude that [is] with him: for [there are] more with us than with him:
- Young's Literal Translation (YLT)
- 'Be strong and courageous, be not afraid, nor be cast down from the face of the king of Asshur, and from the face of all the multitude that [is] with him, for with us [are] more than with him.
Read in context
- 5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
- 6ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
- 7ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
- 8ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- 9ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
Cross references
- 2 Kings 6:16 2 ಅರಸುಗಳು 6:16ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- 2 Chronicles 20:15 2 ಪೂರ್ವಕಾಲವೃತ್ತಾಂತ 20:15ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
- 2 Kings 18:30 2 ಅರಸುಗಳು 18:30ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
- 1 Chronicles 28:20 1 ಪೂರ್ವಕಾಲವೃತ್ತಾಂತ 28:20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Daniel 10:19 ದಾನಿಯೇಲನು 10:19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
- Zechariah 8:9 ಜೆಕರ್ಯ 8:9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
- Deuteronomy 31:6–7 ಧರ್ಮೋಪದೇಶಕಾಂಡ 31:6–7ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು. ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
- Joshua 1:6–9 ಯೆಹೋಶುವ 1:6–9ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ. ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ. ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ. ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.