2 Chronicles · chapter 33 · verse 1
2 Chronicles 33:1 in Kannada
ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.
Manasseyu aalalu aarambhisidaaga hanneradu varushadavanaagiddu yeroo saleminalli aivattaidu varusha aalidanu.
2 Chronicles 33:1 in English
- King James Version (KJV)
- Manasseh [was] twelve years old when he began to reign, and he reigned fifty and five years in Jerusalem:
- World English Bible (WEB)
- Manasseh was twelve years old when he began to reign, and he reigned fifty-five years in Jerusalem.
- American Standard Version (ASV)
- Manasseh was twelve years old when he began to reign; and he reigned fifty and five years in Jerusalem.
- Bible in Basic English (BBE)
- Manasseh was twelve years old when he became king, and he was ruling for fifty-five years in Jerusalem.
- Darby Translation (DBY)
- Manasseh was twelve years old when he began to reign; and he reigned fifty-five years in Jerusalem.
- Webster's Bible (WBS)
- Manasseh [was] twelve years old when he began to reign, and he reigned fifty and five years in Jerusalem:
- Young's Literal Translation (YLT)
- A son of twelve years is Manasseh in his reigning, and fifty and five years he hath reigned in Jerusalem;
Read in context
- 1ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.
- 2ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
- 3ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
Cross references
- 2 Kings 21:1–18 2 ಅರಸುಗಳು 21:1–18ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಅವನು ಐವತ್ತೈದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ. ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು. ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು. ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು. ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು. ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು. ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ-- ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ-- ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು. ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು. ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು. ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ. ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು. ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
- 1 Chronicles 3:13 1 ಪೂರ್ವಕಾಲವೃತ್ತಾಂತ 3:13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
- Isaiah 3:12 ಯೆಶಾಯ 3:12ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
- 2 Chronicles 32:33 2 ಪೂರ್ವಕಾಲವೃತ್ತಾಂತ 32:33ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
- Isaiah 3:4 ಯೆಶಾಯ 3:4ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು.
- Matthew 1:10 ಮತ್ತಾಯನು 1:10ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
- Ecclesiastes 10:16 ಪ್ರಸಂಗಿ 10:16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
- 2 Chronicles 34:1–2 2 ಪೂರ್ವಕಾಲವೃತ್ತಾಂತ 34:1–2ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.